ಅನುಮಾನಾಸ್ಪದ ರೀತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಶವ ಪತ್ತೆ

ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಮೃತದೇಹ ಪತ್ತೆಯಾಗಿರುವ ಘಟನೆ ಹುಸ್ಕೂರು ಗ್ರಾಮದ ಬಳಿ ಇರುವ ರೈಲ್ವೆ ಹಳಿ ಬಳಿ ನಡೆದಿದೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Written by - Krishna N K | Last Updated : Nov 24, 2022, 01:01 PM IST
  • ಅನುಮಾನಾಸ್ಪದ ರೀತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಶವ ಪತ್ತೆ
  • ಘಟನೆ ಹುಸ್ಕೂರು ಗ್ರಾಮದ ಬಳಿ ಇರುವ ರೈಲ್ವೆ ಹಳಿ ಬಳಿ ನಡೆದಿದೆ
  • ಮೃತರನ್ನು ಯುವಕನನ್ನು ನಾಗೇಂದ್ರ ಎಂದು ಗುರುತಿಸಲಾಗಿದೆ
ಅನುಮಾನಾಸ್ಪದ ರೀತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಶವ ಪತ್ತೆ title=

ಬೆಂಗಳೂರು : ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಮೃತದೇಹ ಪತ್ತೆಯಾಗಿರುವ ಘಟನೆ ಹುಸ್ಕೂರು ಗ್ರಾಮದ ಬಳಿ ಇರುವ ರೈಲ್ವೆ ಹಳಿ ಬಳಿ ನಡೆದಿದೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಸ್ಕೂರು ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಹಳಿಯ ಮೇಲೆ ಪ್ರೇಮಿಗಳ ಮೃತದೇಹ ಅನುಮಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಚಿಕ್ಕಬಾಣಾವರ ಮತ್ತು ಗೊಲ್ಲಹಳ್ಳಿ ರೈಲು ನಿಲ್ದಾಣಗಳ ನಡುವಿನ ಹುಸ್ಕೂರು ರೈಲ್ವೆ ನಿಲ್ದಾಣ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ, ಮುಂದುವರೆದ ಚಳಿ

ಪರಸ್ಪರ ಪ್ರೀತಿಸುತ್ತಿದ್ದ ಯುವಕ, ಯುವತಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು ಎನ್ನಲಾಗಿದೆ. ರೈಲು ಹಳಿ ಬಳಿ ಅನುಮಾನಾಸ್ಪದವಾಗಿ ಮೃತದೇಹಗಳು ಪತ್ತೆಯಾದ ಹಿನ್ನೆಲೆ ಚಲಿಸುವ ರೈಲಿಗೆ ಸಿಲುಕಿ ಇವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News