Blast in Nashik : ಮಹಾರಾಷ್ಟ್ರದ ನಾಸಿಕ್‌ನಲ್ಲಿ ವರ್ಷದ ಮೊದಲ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ನಾಸಿಕ್-ಮುಂಬೈ ಹೆದ್ದಾರಿಯಲ್ಲಿರುವ ಗೊಂಡೆ ಗ್ರಾಮದ ಜಿಂದಾಲ್ ಕಂಪನಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 9 ಮಂದಿ ಸಜೀವ ದಹನವಾಗಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ಕಂಪನಿಯ ಬಾಯ್ಲರ್ ಸ್ಪೋಟಗೊಂಡಿದೆ ಎಂದು ಹೇಳಲಾಗಿದೆ. ಸ್ಫೋಟದ ಪರಿಣಾಮ ಎಷ್ಟಿದೆ ಎಂದರೆ 20 ರಿಂದ 25 ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ. ಈ ಕಂಪನಿಯು ಕ್ಲೋಸ್ಡ್ ಪ್ರದೇಶದಲ್ಲಿರುವುದರಿಂದ, ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದ್ದು, ಬೆಂಕಿಯಲ್ಲಿ ಸುಟ್ಟು ಕರಕಲಾದ ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲೇ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.


COMMERCIAL BREAK
SCROLL TO CONTINUE READING

ಜಿಲ್ಲಾಧಿಕಾರಿ ಗಂಗಾಧರನ್ ಡಿ, ಪೊಲೀಸ್ ಎಸ್ಪಿ ಶಹಾಜಿ ಉಮಾಪ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿ ತೀವ್ರವಾಗಿ ಹರಡುತ್ತಿದೆ ಎಂದು ನಾಸಿಕ್ ಮುನ್ಸಿಪಲ್ ಕಾರ್ಪೊರೇಶನ್‌ನ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಖಾನೆಯಲ್ಲಿನ ಕಚ್ಚಾ ವಸ್ತುಗಳ ಪ್ರಕಾರ, ಬೆಂಕಿ ಹೆಚ್ಚು ವೇಗವಾಗಿ ಹರಡುತ್ತಿದೆ. ಹೀಗಾಗಿ ಬೆಂಕಿಯನ್ನು ನಿಯಂತ್ರಿಸಲು ಹೆಚ್ಚಿನ ಸಮಯ ಬೇಕಾಗಬಹುದು. ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.


Earthquake: ಹೊಸ ವರ್ಷದ ಸಂಭ್ರಮದ ಮಧ್ಯೆಯೇ ದೆಹಲಿಯಲ್ಲಿ ಭೂಕಂಪ!


ಭಾರಿ ಸದ್ದು ಕೇಳಿಸಿತು


ಅಧಿಕಾರಿಗಳು ಹೇಳುವ ಪ್ರಕಾರ, ಜಿಂದಾಲ್ ಗ್ರೂಪ್‌ನ ಈ ಕಂಪನಿಯು ಇಗತ್‌ಪುರಿಯ ಮುಂಡೇಗಾಂವ್ ಬಳಿ ಇದೆ. ಬೆಳಗ್ಗೆ ಇದ್ದಕ್ಕಿದ್ದಂತೆ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಅಲ್ಲಿದ್ದ ಕೆಲಸಗಾರರಿಗೆ ಅರ್ಥವಾಗುವಷ್ಟರಲ್ಲಿ ಬೆಂಕಿ ವೇಗವಾಗಿ ವ್ಯಾಪಿಸಲು ಆರಂಭಿಸಿತು. ಕೆಲವೇ ಸಮಯದಲ್ಲಿ ಅನೇಕ ಕಾರ್ಮಿಕರು ಗಾಯಗೊಂಡರು. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಫೋಟದ ನಂತರ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ಪ್ರಕಾರ ಸಂಸ್ಥೆಯ ಸ್ಥಿತಿ ಗಂಭೀರವಾಗಿದೆ. ಬೆಂಕಿಯಿಂದಾಗಿ ಕಾರ್ಖಾನೆಯಲ್ಲಿ ಆಗಾಗ್ಗೆ ಸ್ಫೋಟಗಳು ಸಂಭವಿಸುತ್ತಿವೆ.


ಇದನ್ನೂ ಓದಿ : 1 January 2023: ಟೋಲ್ ಟ್ಯಾಕ್ಸ್, ಕ್ರೆಡಿಟ್ ಕಾರ್ಡ್, LPG ಸೇರಿ ಹಲವು ನಿಯಮಗಳಲ್ಲಿ ಬದಲಾವಣೆ: ನಿಮ್ಮ ಜೇಬಿಗೆ ಪರಿಣಾಮ ಖಂಡಿತ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.