ಮುಂಬೈ: ಮುಂಬೈನ ಗೋದಾಮಿನಲ್ಲಿ 120 ಕೋಟಿ ರೂ. ಮೌಲ್ಯದ ಸುಮಾರು 60 ಕೆಜಿ ಮೆಫೆಡ್ರೋನ್ ಡ್ರಗ್ಸ್ ಅನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ವಶಪಡಿಸಿಕೊಂಡಿದೆ. ಪ್ರಕರಣ ಸಂಬಂಧ ಏರ್‌ ಇಂಡಿಯಾದ ಮಾಜಿ ಪೈಲಟ್‌ ಸೇರಿ 6 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಈ ವಾರದ ಆರಂಭದಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಮಾದಕ ದ್ರವ್ಯ ಸಾಗಾಟದಲ್ಲಿ ಭಾಗಿಯಾಗಿದ್ದ ದೊಡ್ಡ ಜಾಲದೊಂದಿಗೆ ಬಂಧಿತ ಆರೋಪಿಗಳು ಸಂಬಂಧ ಹೊಂದಿದ್ದಾರೆಂದು ತಿಳಿದುಬಂದಿದೆ. ಆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಬಾಂಬ್‌ನಂತೆ ಸ್ಫೋಟಗೊಂಡ ಆ್ಯಪಲ್ ವಾಚ್! ಮುಂದೇನಾಯ್ತು ಗೊತ್ತಾ..?


ಬಂಧಿತ ಪೈಲಟ್ ಸೋಹೈಲ್ ಗಫಾರ್ ಈ ಹಿಂದೆ ಏರ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಅಮೆರಿಕದಲ್ಲಿ ತರಬೇತಿ ಪಡೆದಿರುವ ಸೊಹೈಲ್ ಗಫಾರ್ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಕೆಲವು ವರ್ಷಗಳ ಹಿಂದೆ ತನ್ನ ಕೆಲಸವನ್ನು ತೊರೆದಿದ್ದರು.


ಬಂಧಿತ ಆರೋಪಿಗಳಿಗೆ ಸೇರಿದ ಸಂಘಟನೆಯು ಡ್ರಗ್ಸ್ ಮಾರುಕಟ್ಟೆಯಲ್ಲಿ ಸುಮಾರು 225 ಕೆಜಿ ಮೆಫೆಡ್ರೋನ್ ಔಷಧಿಗಳನ್ನು ಮಾರಾಟ ಮಾಡಿದ್ದು, ೀ ಪೈಕಿ 60 ಕೆಜಿ ಮಾದಕವಸ್ತುವನ್ನು ಗುರುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಡ್ರಗ್ಸ್ ವಿರೋಧಿ ಏಜೆನ್ಸಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: Viral video : ಮೊಬೈಲ್ ರಿಂಗ್ ಟೋನ್ ಗೆ ತಕ್ಕಂತೆ ಹೆಜ್ಜೆ ಹಾಕುವ ಡ್ಯಾನ್ಸರ್ ಗಿಳಿ


ಜಾಮ್‌ನಗರದಲ್ಲಿ ನೌಕಾದಳದ ಗುಪ್ತಚರರು ನೀಡಿದ ಸುಳಿವಿನ ಮೇರೆಗೆ ಮುಂಬೈ ಮಾದಕ ದ್ರವ್ಯ ದಂಧೆಯಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಗುಜರಾತ್‌ನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.


ಆಗಸ್ಟ್‌ನಲ್ಲಿ ವಡೋದರಾದಲ್ಲಿ 200 ಕೆಜಿ ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಏಪ್ರಿಲ್‌ನಲ್ಲಿ ಕಾಂಡ್ಲಾ ಬಂದರಿನಿಂದ 260 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಮುಂದ್ರಾ ಬಂದರಿನಿಂದ 21,000 ಕೋಟಿ ರೂ. ಮೌಲ್ಯದ 3000 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.