ಉತ್ತರ ಪ್ರದೇಶ : ಮದ್ಯ ಸೇವಿಸುವುದನ್ನು ತಡೆದ ಪತ್ನಿಯನ್ನು ಪತಿ ಪೆಟ್ರೋಲ್‌ ಸುರಿದು ಸುಟ್ಟು ಹಾಕಿದ ಘಟನೆ ಉತ್ತರ ಪ್ರದೇಶದ ಬುಡೌನ್‌ನಲ್ಲಿ ನಡೆದಿದೆ. 40 ವರ್ಷದ ಮಹಿಳೆಯನ್ನು ಸಜೀವವಾಗಿ ಸುಟ್ಟು ಹಾಕಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು.. ಮದ್ಯ ಸೇವಿಸುವುದನ್ನು ತಡೆದಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 40 ವರ್ಷದ ಪತ್ನಿಯನ್ನು ಸಜೀವವಾಗಿ ಸುಟ್ಟು ಹಾಕಿದ್ದಾನೆ. ಆರೋಪಿಯನ್ನು ಮುನೀಶ್ ಸಕ್ಸೇನಾ ಎಂದು ಗುರುತಿಸಲಾಗಿದೆ. ಈ ಮದ್ಯವ್ಯಸನಿಯಾಗಿದ್ದು, ಗುರುವಾರ ರಾತ್ರಿ ಕುಡಿದ ಅಮಲಿನಲ್ಲಿ ಮನೆಗೆ ಬಂದಾಗ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 


ಇದನ್ನೂ ಓದಿ: ಗುಡ್‌ ನ್ಯೂಸ್‌...! ಕೇವಲ 25 ರೂ. ಕೊಟ್ಟರೆ ಸಾಕು ʼಕೇಂದ್ರ ಸರ್ಕಾರಿ ಉದ್ಯೋಗʼ 


ಶಾನೋ ಹೆಚ್ಚು ಕುಡಿಯುತ್ತಿದ್ದ, ಅದನ್ನು ಆತನ ಪತ್ನಿ ತಡೆಯಲು ಪ್ರಯತ್ನಿಸಿದಾಗ, ತನ್ನ ಬೈಕ್‌ನಿಂದ ಪೆಟ್ರೋಲ್ ತೆಗೆದುಕೊಂಡು ಬಂದು ಆಕೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಶಾನೋ ಅವರ ಅತ್ತೆ ಮುನ್ನಿ ದೇವಿ ಅವರಿಗೆ ಸಹಾಯ ಮಾಡಲು ಪ್ರಯತ್ನಿಸಿದ್ದು, ಆಕೆಯ ಕೈಗಳಿಗೂ ಸುಟ್ಟ ಗಾಯಗಳಾಗಿವೆ. 


ಇನ್ನು ತಾಯಿ ಸಜೀವವಾಗಿ ಸುಡುತ್ತಿರುವುದನ್ನು ನೋಡಿದ ಆಕೆಯ ಇಬ್ಬರು ಮಕ್ಕಳಾದ 8 ವರ್ಷದ ಸನ್ನಿ ಮತ್ತು 5 ವರ್ಷದ ಅರ್ಜುನ್ ನೆರೆಹೊರೆಯವರಿಗೆ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಜನರು ಬೆಂಕಿ ನಂದಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಶ್ಯಾನೋ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕೆಯ ಅತ್ತೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಸಕ್ಸೇನಾ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.