ಸಿಐಎಸ್‌ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಆರೋಪ: ಮಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

Written by - Bhavishya Shetty | Last Updated : Mar 3, 2025, 09:09 PM IST
    • ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪ
    • ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ
    • ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್
ಸಿಐಎಸ್‌ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಆರೋಪ: ಮಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಆತ್ಮಹತ್ಯೆ

ಸಿಐಎಸ್ಎಫ್ ಮಹಿಳಾ ಅಧಿಕಾರಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Add Zee News as a Preferred Source

ಇದನ್ನೂ ಓದಿ:  ಈ ಸ್ಟಾರ್‌ ನಟ ತನ್ನ ಮನೆಯ ನಾಯಿಗಾಗಿ 45 ಕೋಟಿ ಖರ್ಚು ಮಾಡ್ತಾರಂತೆ.. ಇವರ ಒಟ್ಟು ಆಸ್ತಿ ಎಷ್ಟು ಗೊತ್ತಾ?

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರ ನಿವಾಸಿ, ಚೆನ್ನೈಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳೂರಿನ ರಾವ್ ಅಂಡ್ ರಾವ್ ಸರ್ಕಲ್ ನಲ್ಲಿರುವ ಲಾಡ್ಜ್ ಒಂದರಲ್ಲಿ ಎರಡು ದಿನಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕೃತ್ಯಕ್ಕೂ ಮುನ್ನ ಸುದೀರ್ಘ 20 ನಿಮಿಷಗಳ ವಿಡಿಯೋ ಮಾಡಿದ್ದು ತನ್ನ ಸಾವಿಗೆ ಆಕೆಯೇ ಕಾರಣ ಎಂದು ಹೇಳಿ ವಿಡಿಯೋವನ್ನು ಇನ್ ಸ್ಟಾ ಗ್ರಾಮಿನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಆತ್ಮಹತ್ಯೆಗೆ ಮುನ್ನ ಅಭಿಷೇಕ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ಮೋನಿಕಾ ಸಿಹಾಗ್ ಅವರು ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮೋನಿಕಾ ಸಿಹಾಗ್ ಈಗಾಗಲೇ ವಿವಾಹಿತೆಯಾಗಿದ್ದು, ಆ ವಿಷಯವನ್ನು ಮುಚ್ಚಿಟ್ಟು ಅಭಿಷೇಕ್ ಸಿಂಗ್ ಜೊತೆ ಸಂಬಂಧ ಬೆಳೆಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ:  ಬೆಳಗಿನ ತಿಂಡಿಯ ನಂತರ ಈ ಪುಟ್ಟ ಕಾಳನ್ನು ಬಾಯಲ್ಲಿಕೊಟ್ಟುಕೊಂಡರೇ ಸಾಕು ಬ್ಲಡ್ ಶುಗರ್‌ ಸಂಪೂರ್ಣ ನಾರ್ಮಲ್‌ ಆಗುತ್ತೆ! ಮತ್ತೇ ಹೆಚ್ಚಾಗೋದೆ ಇಲ್ಲ..

ಪ್ರೀತಿಯ ನೆಪದಲ್ಲಿ ತನಗೆ ಮೋಸ ಮಾಡಿದ್ದಾಳೆ. ತನ್ನಿಂದ ದೈಹಿಕ ಸುಖ, ಆರ್ಥಿಕ ಲಾಭ ಪಡೆದು ಮೋಸ ಮಾಡಿದ್ದಾಳೆ. ಆಕೆ ಹಲವರ ಜೊತೆಗೆ ಇದೇ ರೀತಿಯ ಸಂಬಂಧ ಇಟ್ಟುಕೊಂಡಿರುವುದು ತಿಳಿದುಬಂದಿದೆ. ಮೋನಿಕಾಗೆ ಎಂಟು ಲಕ್ಷದಷ್ಟು ಮೌಲ್ಯದ ಚಿನ್ನಾಭರಣ ತೆಗೆದುಕೊಟ್ಟಿದ್ದೇನೆ ಎಂದು ವಿಡಿಯೋದಲ್ಲಿ ಅಭಿಷೇಕ್‌ ಸಿಂಗ್‌ ಹೇಳಿದ್ದಾರೆ. ಮೋನಿಕಾ, ಗುಜರಾತಿನ ಅಹ್ಮದಾಬಾದ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ ಎಂದು ಅಭಿಷೇಕ್ ಹೇಳಿಕೊಂಡಿದ್ದಾನೆ. ಘಟನೆ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News