ಅಕ್ರಮ ಸಂಬಂಧ ಶಂಕೆ; ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಕೊಲೆ!!

ಕೊಲೆಯಾದ ಆಸ್ಮಾ ಖಾನ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ನೋಯ್ಡಾದ ಸೆಕ್ಟರ್ 62ರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಹೈದರ್ ಬಿಹಾರ ಮೂಲದವನಾಗಿದ್ದು, ಎಂಜಿನಿಯರಿಂಗ್ ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿದ್ದನೆಂದು ತಿಳಿದುಬಂದಿದೆ. 

Written by - Puttaraj K Alur | Last Updated : Apr 5, 2025, 05:03 PM IST
  • ಅಕ್ರಮ ಸಂಬಂಧ ಶಂಕಿಸಿ ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಹತ್ಯೆ
  • ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿ ಪದೇ ಪದೇ ಗಲಾಟೆ ಮಾಡುತ್ತಿದ್ದ ಪತಿ
ಅಕ್ರಮ ಸಂಬಂಧ ಶಂಕೆ; ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿಯ ಬರ್ಬರ ಕೊಲೆ!!

Uttar Pradesh Murder Case: ಅಕ್ರಮ ಸಂಬಂಧವಿದೆ ಅಂತಾ ಶಂಕಿಸಿ ವ್ಯಕ್ತಿಯೊಬ್ಬ ತಲೆಗೆ ಸುತ್ತಿಗೆಯಿಂದ ಹೊಡೆದು ಪತ್ನಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

Add Zee News as a Preferred Source

ಕೊಲೆಯಾದ ಮಹಿಳೆಯನ್ನು ಆಸ್ಮಾ ಖಾನ್ (42) ಎಂದು ಗುರುತಿಸಲಾಗಿದೆ. ನೂರುಲ್ಲಾ ಹೈದರ್ ಎಂಬಾತನೇ ಹತ್ಯೆಗೈದ ಆರೋಪಿ. ಆಸ್ಮಾ ಖಾನ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ನೋಯ್ಡಾದ ಸೆಕ್ಟರ್ 62ರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಹೈದರ್ ಬಿಹಾರ ಮೂಲದವನಾಗಿದ್ದು, ಎಂಜಿನಿಯರಿಂಗ್ ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿದ್ದನೆಂದು ತಿಳಿದುಬಂದಿದೆ. 

ಇದನ್ನೂ ಓದಿ: ನಿತ್ಯಾನಂದ ಸಾವಿನ ಸುದ್ದಿ ನಿಜವೇ?! ಕೈಲಾಸದಿಂದಲೇ ಬಂತು ಶಾಕಿಂಗ್ ಸ್ಪಷ್ಟನೆ..

2005ರಲ್ಲಿ ಮದುವೆಯಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಘಟನೆಯ ಬಳಿಕ ದಂಪತಿಯ ಮಗ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ. ಆರೋಪಿ ಹೈದರ್ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದೆ ಅಂತಾ ಶಂಕಿಸಿ ಪದೇ ಪದೇ ಗಲಾಟೆ ಮಾಡುತ್ತಿದ್ದನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆ ಬಗ್ಗೆ ಮಾತನಾಡಿರುವ ಆಸ್ಮಾ ಖಾನ್ ಸೋದರ ಮಾವ, ದಂಪತಿಗೆ ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾರೆ. ಮಗ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಮಗಳು 8ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಗಂಡ-ಹೆಂಡತಿ ಹಲವಾರು ದಿನಗಳಿಂದ ಜಗಳವಾಡುತ್ತಿದ್ದರು. ಆದರೆ ಆತ ಈ ರೀತಿ ಹೆಂಡತಿಯನ್ನ ಕೊಲೆ ಮಾಡುತ್ತಾನೆ ಅಂತಾ ನಾವು ನಿರೀಕ್ಷಿಸಿರಲಿಲ್ಲ. ಇದರಿಂದ ನಮಗೆ ಆಘಾತವಾಗಿದೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ. 

ಇದನ್ನೂ ಓದಿ: ಗೆಳತಿ ಮದುವೆಗೆ ಒಪ್ಪಲಿಲ್ಲ ಅಂತ ಮೇಕೆಯನ್ನ ವಿವಾಹವಾದ ಯುವಕ..! ಮುಂದಾಗಿದ್ದು ಭಯಾನಕ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News