ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ನೂತನ ಎಸ್‌ಪಿಯಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಬಾಲದಂಡಿ  ಪುಡಿ ರೌಡಿಗಳ ಎಡೆಮುರಿ ಕಟ್ಟಲು ಮುಂದಾಗಿದ್ದು ರೌಡಿಸಂ ಹಾಗೂ ಅಕ್ರಮ ಚಟುವಟಿಕೆ ತಡೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಖಡಕ್ ಎಚ್ಚರಿಕೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಪುಡಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಿರುವ ಮಂಡ್ಯ ನೂತನ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ(Mandya New SP Mallikarjuna Baladandi), ರೌಡಿಸಂ ಹಾಗೂ ಅಕ್ರಮ ಚಟುವಟಿಕೆ ತಡೆಗಾಗಿ ಕಾನೂನು ಬಾಹಿರ ಕೃತ್ಯ ನಡೆಸುವವರ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಸಣ್ಣಪುಟ್ಟ ಪುಡಿ ರೌಡಿಗಳು ಹುಡುಗಿಯರ ಚುಡಾಯಿಸುವುದು, ಸಣ್ಣ ಮಟ್ಟದಲ್ಲಿ ಗ್ರಾಮದಲ್ಲಿ ಹವಾ ಮೇಂಟೈನ್ ಮಾಡುವಂತವರು, ಸಾರ್ವಜನಿಕ ಪ್ರದೇಶದಲ್ಲಿ ಭಯ ಹುಟ್ಟಿಸುವುದು. ಇಲ್ಲವೇ, ಲಾಂಗ್, ಮಚ್ಚು, ಹಿಡಿದು ಓಡಾಡುವವರಿಗೆ ರೌಡಿ ಶೀಟ್ ತೆರೆಯಲಾಗುತ್ತದೆ. ಜೊತೆಗೆ ಕಾನೂನಾತ್ಮಕವಾಗಿ  ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನೂ ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ರಾತ್ರಿಯ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ, ಪೆಟ್ರೊಲಿಂಗ್ ವ್ಯವಸ್ಥೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. 


ಇದನ್ನೂ ಓದಿ- ಸಣ್ಣ ವಿಚಾರಕ್ಕೆ ಮನಸ್ಥಾಪ: ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿ ನೇಣಿಗೆ ಶರಣು


ಡ್ರಗ್ಸ್ ನಿಯಂತ್ರಣಕ್ಕೆ ಕ್ರಮ: 
ಅಕ್ರಮ ಚಟುವಟಿಕೆ (Illegal Activity) ಗ್ಯಾಂಬ್ಲಿಂಗ್, ಕ್ಲಬ್, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್, ವೇಶ್ಯಾವಾಟಿಕೆ, ಡ್ರಗ್ಸ್ ತಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದಾರೆ ಅನ್ನೋ ದೂರು ಇದೆ. ಅಂತವರನ್ನು ಗುರುತಿಸಿ ಹೆಚ್ಚಿನ ರೀತಿಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಸಮಾಜದಿಂದ ಡ್ರಗ್ಸ್ ಪಿಡುಗು ತೊಲಗಿಸಬೇಕು. ಡ್ರಗ್ಸ್ ನಿಯಂತ್ರಣಕ್ಕೆ ಶಾಲಾ-ಕಾಲೇಜುಗಳಲ್ಲಿ ಜಾಗೃತಿ, ಅರಿವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು. 


ಇದನ್ನೂ ಓದಿ- ರೀಲ್ಸ್ ರಾಣಿ ಶೋಕಿಗೆ ಸಾಲ ಮಾಡಿದ್ಲು : ಸಾಲತೀರಿಸಲು ಮನೆಯೊಡತಿ ಕೊಲೆ ಮಾಡಿ ಅಂದರ್ ಆದ್ಲು


ಸೈಬರ್ ಕ್ರೈಂ ತಡೆಗೆ ಕ್ರಮ: 
ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮೊಬೈಲ್ ನಲ್ಲಿ ಫೇಕ್ ಸೈಟ್ ಗಳಲ್ಲಿ ಹಣ ಎಗರಿಸುವ ಕೆಲಸ ಆಗ್ತಿದೆ. ಇಂತಹ ಸಂದರ್ಭದಲ್ಲಿ 1930 ಹೆಲ್ಪ್ ಲೈನ್ ಸಂಖ್ಯೆಗೆ ಕರೆ ಮಾಡಿ ಪ್ರಕರಣ ಪತ್ತೆ ಹಚ್ಚುವ ಕೆಲಸ ಮಾಡಬಹುದು. ಮುಂದಿನ ದಿನಗಳಲ್ಲಿ ಸೈಬರ್ ಪ್ರಕರಣಗಳಲ್ಲಿ ನಮ್ಮದೆ ತಂತ್ರಜ್ಞಾನ ಅಳವಡಿಸಿಕೊಂಡು ಪತ್ತೆ ಕಾರ್ಯ ನಡೆಸಲಾಗುವುದು ಎಂದವರು ಮಾಹಿತಿ ನೀಡಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.