ಮಂಡ್ಯ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣ: ಪುತ್ರಿಯನ್ನ ಹತ್ಯೆಗೈದಿದ್ದ ಆರೋಪಿಯ ತಂದೆಯ ಹತ್ಯೆ!!

Deepika Murder Case: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ಶಿಕ್ಷಕಿ ದೀಪಿಕಾಳ ಶವವು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. 

Written by - Puttaraj K Alur | Last Updated : May 6, 2025, 08:54 PM IST
  • 2024ರ ಜನವರಿ 22ರಂದು ಶಿಕ್ಷಕಿ ದೀಪಿಕಾ ಮೇಲುಕೋಟೆಯ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು
  • ಈ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದ ಪೊಲೀಸರು ನಿತೀಶ್ ಎಂಬಾತನನ್ನು ಬಂಧಿಸಿದ್ದರು
  • ಮಗಳನ್ನ ಕಳೆದುಕೊಂಡ ನೋವಿನಲ್ಲಿದ್ದ ದೀಪಿಕಾಳ ತಂದೆ ನಿತೀಶ್‌ ತಂದೆಯನ್ನ ಹತ್ಯೆ ಮಾಡಿದ್ದಾನೆ
ಮಂಡ್ಯ ಶಿಕ್ಷಕಿ ದೀಪಿಕಾ ಹತ್ಯೆ ಪ್ರಕರಣ: ಪುತ್ರಿಯನ್ನ ಹತ್ಯೆಗೈದಿದ್ದ ಆರೋಪಿಯ ತಂದೆಯ ಹತ್ಯೆ!!

Deepika Murder Case: ಮೇಲುಕೋಟೆಯ ಬೆಟ್ಟದಲ್ಲಿ ಮಂಡ್ಯದ ಶಿಕ್ಷಕಿ ದೀಪಿಕಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮಗಳನ್ನು ಕಳೆದುಕೊಂಡ ಆಕೆಯ ತಂದೆಯ ಆಕ್ರೋಶ ಕುದಿಯುತ್ತಿತ್ತು. ತನ್ನ ಮಗಳನ್ನ ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದು ದೀಪಿಕಾಳ ತಂದೆ ನಿರ್ಧರಿಸಿದ್ದ.  

Add Zee News as a Preferred Source

ಇದೀಗ ಒಂದು ವರ್ಷದ ಬಳಿಕ ತನ್ನ ಮಗಳ ಮಗಳ ಕೊಲೆ ಮಾಡಿದ್ದ ಆರೋಪಿ ನಿತೀಶ್‌ ಎಂಬಾತನ ತಂದೆಯನ್ನ ದೀಪಿಕಾಳ ತಂದೆ ಹತ್ಯೆ ಮಾಡಿದ್ದಾನೆ. ಈ ಮೂಲಕ ತನ್ನ ಮಗಳ ಹತ್ಯೆ ಮಾಡಿದ್ದ ಆರೋಪಿಯ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದ್ದಾನೆ. 

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 1.50% ಏರಿಕೆ

2024ರ ಜನವರಿ 22ರಂದು ಶಿಕ್ಷಕಿ ದೀಪಿಕಾ ಮೇಲುಕೋಟೆಯ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಬಗ್ಗೆ ತೀವ್ರ ತನಿಖೆ ಕೈಗೊಂಡಿದ್ದ ಪೊಲೀಸರು ನಿತೀಶ್ ಎಂಬಾತನನ್ನು ಬಂಧಿಸಿದ್ದರು. ಮಗಳನ್ನು ಕಳೆದುಕೊಂಡ ನೋವಿನಲ್ಲಿದ್ದ ದೀಪಿಕಾಳ ತಂದೆ ವೆಂಕಟೇಶ್ ಆರೋಪಿ ನಿತೀಶ್ ತಂದೆ ನರಸಿಂಹೇಗೌಡನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. 

ಹತ್ಯೆಯಾಗಿರುವ ನರಸಿಂಹೇಗೌಡ ಮಗಳ ಮದುವೆ ತಯಾರಿಯಲ್ಲಿದ್ದರಂತೆ. ಇದರಿಂದ ಕೆರಳ ಕೆಂಡವಾಗಿದ್ದ ದೀಪಿಕಾಳ ತಂದೆ ವೆಂಕಟೇಶ್‌, ʼನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದಿಯಾ?ʼ ಅಂತಾ ಕೊಲೆ ಮಾಡಿ ಎಸ್ಕೇಪ್‌ ಆಗಿದ್ದಾನೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಉಗ್ರರ ವಿರುದ್ಧ ಹೋರಾಟಕ್ಕೆ ಭಾರತಕ್ಕೆ ರಷ್ಯಾ ಬೆಂಬಲ

ಏನಿದು ಘಟನೆ?  

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ಶಿಕ್ಷಕಿ ದೀಪಿಕಾಳ ಶವವು ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶಿಕ್ಷಿಕ ದೀಪಿಕಾ ಮತ್ತು ನಿತೀಶ್ ನಡುವೆ ಸಂಬಂಧ ಇತ್ತು ಎನ್ನಲಾಗಿದೆ. ಈ ವಿಷಯ ತಿಳಿದು ನಿತೀಶ್‌ಗೆ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ವಾರ್ನಿಂಗ್ ಮಾಡಿದ್ದರಂತೆ. ಕುಟುಂಬಸ್ಥರ ವಾರ್ನಿಂಗ್ ಬಳಿಕ ಇಬ್ಬರು ದೂರವಾಗಿದ್ದರು.

ಆದರೆ ದೀಪಿಕಾ ತನ್ನಿಂದ ದೂರವಾದ ಬಳಿಕ ನಿತೀಶ್ ಮನನೊಂದಿದ್ದ. ಬಳಿಕ 2024ರ ಜನವರಿ 19ರಂದು ತನ್ನ ಹುಟ್ಟುಹಬ್ಬದ ನೆಪದಲ್ಲಿ ಮೇಲುಕೋಟೆಯ ಬೆಟ್ಟಕ್ಕೆ ದೀಪಿಕಾಳನ್ನು ನಿತೀಶ್ ಕರೆಸಿಕೊಂಡಿದ್ದ. ಈ ವೇಳೆ ಅಲ್ಲಿ ಇಬ್ಬರ ನಡುವೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ಕೋಪಗೊಂಡ ನಿತೀಶ್ ದೀಪಿಕಾಳನ್ನು ಹತ್ಯೆ ಮಾಡಿದ್ದ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News