ಮಳಲಿ ಮಸೀದಿ ವಿವಾದ: ನ. 9 ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
![ಮಳಲಿ ಮಸೀದಿ ವಿವಾದ: ನ. 9 ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ ಮಳಲಿ ಮಸೀದಿ ವಿವಾದ: ನ. 9 ಕ್ಕೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ](https://kannada.cdn.zeenews.com/kannada/sites/default/files/styles/zm_500x286/public/2022/10/17/262155-malali-masjid.jpeg?itok=tiwSvHaX)
ಮಂಗಳೂರಿನ ಮಳಲಿ ಮಸೀದಿ ಕಟ್ಟಡ ವಿವಾದದ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ.
ದಕ್ಷಿಣ ಕನ್ನಡ : ಮಂಗಳೂರಿನ ಮಳಲಿ ಮಸೀದಿ ಕಟ್ಟಡ ವಿವಾದದ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ.
ಇದನ್ನೂ ಓದಿ : ದೀಪಾವಳಿ ಹಬ್ಬ ಹಿನ್ನೆಲೆ KSRTCಯಿಂದ 1500 ಹೆಚ್ಚುವರಿ ಬಸ್ ಗಳ ವ್ಯವಸ್ಥೆ
ಮಸೀದಿ ಜಾಗವನ್ನು ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.
ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿದೆ.
ಇದನ್ನೂ ಓದಿ : Yathindra Siddaramaiah : ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫೀಕ್ಸ್!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ