ಫಾಝಿಲ್ ಹತ್ಯೆ ಪ್ರಕರಣ: ಮತ್ತೆ 6 ಮಂದಿ ಆರೋಪಿಗಳ ಬಂಧನ
ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ 2 ದಿನಗಳ ಹಿಂದೆ ಹೆಚ್ಚಿನ ಹಣಕ್ಕೆ ಕಾರು ಬಾಡಿಗೆ ನೀಡಿದ್ದ ಅಜಿತ್ ಕ್ರಾಸ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‍ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಮತ್ತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಏಳಕ್ಕೇರಿದೆ.
ಬಂಧಿತರನ್ನು ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ (29), ಕುಳಾಯಿಯ ಮೋಹನ್ ಅಲಿಯಾಸ್ ನೇಪಾಲಿ ಮೋಹನ್, ಮೋಹನ್ ಸಿಂಗ್ (26), ಗಿರಿಧರ್ (23), ಸುರತ್ಕಲ್‍ನ ಅಭಿಷೇಕ್(21), ಶ್ರೀನಿವಾಸ್(23), ದೀಕ್ಷಿತ್(21) ಎಂದು ಗುರುತಿಸಲಾಗಿದೆ. ಸಂಘಟನೆಯೊಂದಲ್ಲಿ ಗುರುತಿಸಿಕೊಂಡಿದ್ದ ಇವರ ಮೇಲೆ ವಿವಿಧ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
ತ್ರಿವಳಿ ತಲಾಖ್ ನಿಷೇಧವಾದ್ರೂ ಡೋಂಟ್ ಕೇರ್: ಲಿಫ್ಟ್ ನಲ್ಲೇ ತಲಾಖ್ ನೀಡಿದ ಪತಿ
ಕಾಟಿಪಳ್ಳ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣ ಸಂಬಂಧ 2 ದಿನಗಳ ಹಿಂದೆ ಹೆಚ್ಚಿನ ಹಣಕ್ಕೆ ಕಾರು ಬಾಡಿಗೆ ನೀಡಿದ್ದ ಅಜಿತ್ ಕ್ರಾಸ್ತಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಉಡುಪಿಯಲ್ಲಿ ಹತ್ಯೆಗೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಈ ಕುರಿತು ಮಾಹಿತಿ ನೀಡಿದ ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ‘ಈ ಎಲ್ಲಾ ಆರೋಪಿಗಳು ನೇರವಾಗಿ ಹತ್ಯಾ ಪ್ರಕರಣದಲ್ಲಿ ಭಾಗಿಯಾಗಿದ್ದು, ಜುಲೈ 26ರಂದು ರಾತ್ರಿಯಿಂದಲೇ ಎಲ್ಲರೂ ಒಬ್ಬರಿಗೊಬ್ಬರು ಮಾತನಾಡಿಕೊಂಡು ಸುಮಾರು 7 ಮಂದಿಯನ್ನು ಗುರಿಯಾಗಿಸಿಕೊಂಡು ಹತ್ಯೆಗೆ ಮುಂದಾಗಿದ್ದರು. ಕೊನೆಗೆ ಮೇ 28ರಂದು ಫಾಝಿಲ್ ಅವರನ್ನೇ ಗುರಿಯಾಗಿಸಿ ಹತ್ಯೆಗೆ ಸಂಚು ರೂಪಿಸಿದ್ದರು. ಹತ್ಯೆಗೆ ನಿಖರ ಕಾರಣ ಮುಂದಿನ ತನಿಖೆಯಿಂದ ತಿಳಿದು ಬರಲಿದೆ’ ಎಂದು ಹೇಳಿದ್ದಾರೆ.
ಫಾಝಿಲ್ ಹತ್ಯೆ ನಡೆಸಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಮಂಗಳವಾರ ಮುಂಜಾನೆ 5.30ರ ವೇಳೆಗೆ ಉಡುಪಿ ಜಿಲ್ಲೆಯ ಉದ್ಯಾವರ ಬಳಿ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಹೆಂಡತಿ ಮಾಡಿದ ಕಬಾಬ್ ರುಚಿಯಾಗಿಲ್ಲ ಅಂತಾ ನೇಣಿಗೆ ಶರಣಾದ ಪತಿ..!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.