ಹೋಟೆಲ್‌ನಲ್ಲಿ ಭಾರೀ ಬೆಂಕಿ ಅವಘಡ; 14 ಮಂದಿ ದುರ್ಮರಣ!!

ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಅನೇಕರಿಗೆ ಗಂಭೀರ ಗಾಯಳಾಗಿವೆ ಎಂದು ವರದಿಯಾಗಿದೆ...

Written by - Puttaraj K Alur | Last Updated : Apr 30, 2025, 07:59 PM IST
  • ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ
  • ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
  • ರಕ್ಷಣಾ ಕಾರ್ಯಾಚರಣೆಯ ಮೂಲಕ ಹಲವಾರು ಜನರನ್ನು ರಕ್ಷಿಸಲಾಗಿದೆ
ಹೋಟೆಲ್‌ನಲ್ಲಿ ಭಾರೀ ಬೆಂಕಿ ಅವಘಡ; 14 ಮಂದಿ ದುರ್ಮರಣ!!

Kolkata Hotel Fire: ಕೇಂದ್ರ ಕೋಲ್ಕತ್ತಾದ ಹೋಟೆಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಕ್ಕಿಯ ಕೆನ್ನಾಲಿಗೆ ಇಡೀ ಹೋಟೆಲ್‌ಗೆ ವ್ಯಾಪಿಸಿ ದುರ್ಘಟನೆ ಸಂಭವಿಸಿದೆ.

Add Zee News as a Preferred Source

ಬೆಂಕಿಯನ್ನ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಘಟನೆಯಲ್ಲಿ ಹಲವಾರು ಶವಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆಯ ಮೂಲಕ ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ ಮನೋಜ್ ಕುಮಾರ್ ವರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಜಾಂಬವಂತನ ಜೊತೆ ಹುಲಿರಾಯನ ಕಾಳಗ..! ರಣ ರೋಚಕ ಹೋರಾಟಕ್ಕೆ ನಡುಗಿದ ಕಾಡು.. ವಿಡಿಯೋ ವೈರಲ್‌

ಈ ಬೆಂಕಿ ದುರಂತಕ್ಕೆ ಕಾರಣವೇನು ಅನ್ನೋದು ಇನ್ನೂ ತಿಳಿದುಬಂದಿಲ್ಲ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರ್ಘಟನೆಗಳನ್ನ ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ʼಬೆಂಕಿ ಅವಘಡ ಸಂಭವಿಸಿರುವುದು ದೊಡ್ಡ ದುರಂತ. ಕಟ್ಟಡದಲ್ಲಿ ಇನ್ನೂ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಅಥವಾ ಭದ್ರತೆ ಇರಲಿಲ್ಲ. ನಿಗಮ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲವೆಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನರಚನೆ: ಮಾಜಿ RAW ಮುಖ್ಯಸ್ಥರನ್ನೇ ಅಧ್ಯಕ್ಷರನ್ನಾಗಿ ನೇಮಿಸಿದ ಕೇಂದ್ರ ಸರ್ಕಾರ... ಯಾರು ಈ ಅಲೋಕ್ ಜೋಶಿ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News