ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ರೇಣುಕಾ ಸ್ವಾಮಿಯ ಅಮಾನುಷ ಹತ್ಯೆಯನ್ನು ಖಂಡಿಸಿ  ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸಮುದಾಯ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯ, ರಾಜ್ಯ ಬೇಡ ಜಂಗಮ ಸಂಘಟನೆಯ ಯುವ ಘಟಕದ ಅಧ್ಯಕ್ಷರು ಹಾಗೂ ಇತ್ತೀಚೆಗೆ ಕೊಲೆಗೀಡಾಗಿದ್ದ ನೇಹಾ ತಂದೆ ನಿರಂಜನ ಹಿರೇಮಠ ನೇತೃತ್ವದಲ್ಲಿ  ಹುಬ್ಬಳ್ಳಿಯಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.


ಇದನ್ನೂ ಓದಿ- Darshan Arrest: ದರ್ಶನ್‌, ಪರಮೇಶ್ವರ್ ಎಲ್ಲರಿಗೂ ಕಾನೂನು ಒಂದೇ- ಗೃಹ ಸಚಿವ ಡಾ. ಜಿ ಪರಮೇಶ್ವರ್


ಕನ್ನಡ ಚಿತ್ರರಂಗದ ಖ್ಯಾತ ನಟ  ದರ್ಶನ್ ಅವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗ ಮೂಲದ  ರೇಣುಕಾಸ್ವಾಮಿಯ ಕೊಲೆ ಮಾನವ ಸಮಾಜ ತಲೆತೆಗ್ಗಿಸುವಂತಹದು ಎಂದು ಪ್ರತಿಭಟನಾಕಾರರು ಹೇಳಿದರು. 


ಇದನ್ನೂ ಓದಿ- ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌


ದುಷ್ಕೃತ್ಯದಲ್ಲಿ ಭಾಗಿಯಾಗಿ ಪೊಲೀಸ್ ವಶದಲ್ಲಿರುವ ಎಲ್ಲರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಮತ್ತು ಹತ್ಯೆಗೀಡಾದ ಬೇಡ ಜಂಗಮ ಸಮಾಜದ ಯುವಕ ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಹಾಗೂ ಅಗತ್ಯ ನೆರವು ನೀಡಿ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.