ಮುಂಬೈ (ಮಹಾರಾಷ್ಟ್ರ) : ಮುಂಬೈನಲ್ಲಿ ನಡೆದ ಆಘಾತಕಾರಿ ಘಟನೆಯೊಂದು ನಡೆದಿದೆ. ಯುವಕನೊಬ್ಬ ತನ್ನ ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. ಆರೋಪಿ ದೀಪಕ್ ಸೋಮವಾರ ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದೊಳಗೆ ತನ್ನ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯೂ ಅದೇ ಆಯುಧದಿಂದ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. 


COMMERCIAL BREAK
SCROLL TO CONTINUE READING

ಮುಂಬೈನ ಸಾಕಿ ನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿರುವ ದತ್ ನಗರದಲ್ಲಿ ಈ ಘಟನೆ ನಡೆದಿದೆ. ಆಟೋದೊಳಗೆ ಈ ಪ್ರೇಮಿಗಳ ನಡುವೆ ವಾಗ್ವಾದ ನಡೆದಿತ್ತಂತೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಕೈ ಮೀರಿದೆ. ಆಗ ಉದ್ವೇಗದಲ್ಲಿ ಪ್ರಿಯಕರ ಪ್ರೇಯಸಿಯ ಕತ್ತು ಸೀಳಿದ್ದಾನೆ. ಬಳಿಕ ತಾನೂ ಸಹ ಅದೇ ಆಯುಧದಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಸಿದ್ದಾನೆ ಎನ್ನಲಾಗಿದೆ.


ಇದನ್ನೂ ಓದಿಭೀಕರ ಬಿಸಿಲು ಹಿನ್ನೆಲೆ 'ಡೆತ್ ಜೋನ್' ಆಗಿ ಮಾರ್ಪಟ್ಟ ಯುಪಿ ಜಿಲ್ಲೆ, ಕೆಲವೇ ಗಂಟೆಗಳಲ್ಲಿ 10 ಜನರ ಸಾವು!


ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ದೀಪಕ್ ಬೋರ್ಸೆ ತನ್ನ ಗೆಳತಿ ಪಂಚಶೀಲಾ ಜಮದಾರ್ ಅವರ ಕತ್ತು ಸೀಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. 


ಆರೋಪಿಯ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎನ್ನಲಾಗಿದೆ. ಪೊಲೀಸರ ಪ್ರಕಾರ, ಮಹಿಳೆ ಮತ್ತು ಆರೋಪಿ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು ಮತ್ತು ಆಟೋರಿಕ್ಷಾದೊಳಗೆ ಅವರ ನಡುವೆ ಜಗಳ ಪ್ರಾರಂಭವಾಯಿತು ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಲೈಂಗಿಕತೆಗೆ ನಕಾರ ಹೇಳುವುದು ಕ್ರೌರ್ಯ, ಆದರೆ ಅಪರಾಧವಲ್ಲ, ಕರ್ನಾಟಕ ಹೈಕೋರ್ಟ್ ಆದೇಶ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.