ನ್ಯಾಯಾಲಯಕ್ಕೆ ಹಾಜರಾದ ಮುರುಘಾ ಶ್ರೀ : 4 ದಿನ ಖಾಕಿ ಕಸ್ಟಡಿಗೆ
ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರುಘಾ ಶ್ರೀಗಳನ್ನು ಚಿತ್ರದುರ್ಗ 2ನೇ ಸೆಷನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಚಿತ್ರದುರ್ಗ : ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುರುಘಾ ಶ್ರೀಗಳನ್ನು ಚಿತ್ರದುರ್ಗ 2ನೇ ಸೆಷನ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುರುಘಾ ಶರಣರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಇಂದು ಬೆಳಗ್ಗೆ ಜೈಲಿನಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಪೊಲೀಸ್ ಸರ್ಪಗಾವಲಿನಲ್ಲಿ ಜಿಲ್ಲಾ ಸೆಷನ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಇಂದು ವಿಚಾರಣೆ ನಡೆಯಬೇಕಿದ್ದ ಕಾರಣ ಖುದ್ದು ಶ್ರೀಗಳೇ ಹಾಜರಾಗಬೇಕು ಎಂದು ಕೋರ್ಟ್ ಸೂಚನೆ ನೀಡಿತ್ತು. ಈ ಹಿನ್ನೆಲೆ ಶ್ರೀಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದರು.
ಇದನ್ನು ಓದಿ : Muruga Mutt Seer case: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಬೃಹತ್ ಪ್ರತಿಭಟನೆ
ಇನ್ನು ಶ್ರೀಗಳನ್ನು ವಿಚಾರಣೆ ನಡೆಸಲು 5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಇದೀಗ 4 ದಿನಗಳ ಕಾಲ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಮುರುಘಾ ಶ್ರೀಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶ್ರೀಗಳು ಶಿಫ್ಟ್
ಶ್ರೀಗಳು ಹೃದಯ ರೋಗದಿಂದ ಬಳಲುತ್ತಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಬೆಳಗ್ಗೆಯಿಂದಲೇ ಚಿಕಿತ್ಸೆ ನೀಡಲಾಗಿದೆ. ಹೃದಯರೋಗ ಹಾಗೂ ರಕ್ತದೊತ್ತಡ ಹೆಚ್ಚು ಇರುವುದರಿಂದ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಬೇಕೆಂದು ದಾವಣಗೆರೆಯ ನಾರಾಯಣ ಹೃದಯಾಲಯದ ವೈದ್ಯರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.