POCSO Case: ಮುರುಘಾ ಶ್ರೀಗಳಿಗೆ 9 ದಿನಗಳ ನ್ಯಾಯಾಂಗ ಬಂಧನ
Murugha Shri : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ನ್ಯಾಯಾಲಯ ಸೆಪ್ಟೆಂಬರ್ 14 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
Judicial custody to Muruga Shri : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗಳನ್ನು ಬಂಧಿಸಲಾಗಿತ್ತು. ಇದೀಗ ಅವರಿಗೆ ನ್ಯಾಯಾಲಯ ಸೆಪ್ಟೆಂಬರ್ 14 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಚಿತ್ರದುರ್ಗದ ಎರಡನೇ ಅಪರ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೋಮಲ ಅವರು ಈ ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು
ತನಿಖಾಧಿಕಾರಿ ಮುರುಘಾ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ಕೇಳಿಲ್ಲ. ಇನ್ವೆಸ್ಟಿಗೇಷನ್ ಎಲ್ಲಾ ಮುಗಿಯಿತಾ ಅಂತಾ ಎಂದು ನ್ಯಾಯಾಧೀಶರು ತನಿಖಾಧಿಕಾರಿಯನ್ನು ಪ್ರಶ್ನಿಸಿದರು. ಮತ್ತೆ ಪೊಲೀಸ್ ಕಸ್ಟಡಿಗೆ ಕೇಳದ ಹಿನ್ನೆಲೆ ನ್ಯಾ.ಕೋಮಲಾ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ಹಿನ್ನೆಲೆ ಮುರುಘಾ ಶ್ರೀಗಳಿಗೆ ಇನ್ನೂ ಒಂಬತ್ತು ದಿನ ಜೈಲೇ ಗತಿ ಎನ್ನಲಾಗುತ್ತಿದೆ.
ಕೆಲವೇ ಹೊತ್ತಿನಲ್ಲಿ ಮುರುಘಾ ಶ್ರೀಗಳು ಜೈಲಿಗೆ ಸ್ಥಳಾಂತರ ಮಾಡಲಿದ್ದಾರೆ. ಈ ಹಿನ್ನೆಲೆ ಚಿತ್ರದುರ್ಗ ಜಿಲ್ಲಾ ಕಾರಾಗೃಹದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಜೈಲಿನ ಮುಂಭಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಸ್ಥಳೀಯ ಪೊಲೀಸರು ಸೇರಿದಂತೆ KSRP ತುಕಡಿ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ಮಳೆ ಅವಾಂತರ: ಮನೆಗೋಡೆ ಕುಸಿದು ಯುವಕ ಸಾವು, ಕೆರೆಯಂತಾದ ಬೇಗೂರು ಠಾಣೆ
ಇನ್ನೂ ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಪರ ವಕೀಲರಿಗೆ ಸೂಚನೆ ನೀಡಲಾಗಿದೆ. ಈ ಅರ್ಜಿ ವಿಚಾರಣೆಯನ್ನು ಸೆ.7 ಕ್ಕೆ ಮುಂದೂಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.