ಸುಶಾಂತ್ ಸಿಂಗ್ ರಜಪೂತ್ಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣ: ರಿಯಾ ಚಕ್ರವರ್ತಿ ವಿರುದ್ಧ ಎನ್‌ಸಿಬಿ ಚಾರ್ಜ್‌ಶೀಟ್
Rhea Chakraborty: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂಯೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.
Rhea Chakraborty: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂಯೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಬುಧವಾರ ನಟಿ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಮತ್ತು ಇತರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಸರ್ಪಾಂಡೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪ್ರಾಸಿಕ್ಯೂಷನ್ ಆರೋಪಗಳನ್ನು ಉಳಿಸಿಕೊಂಡಿದೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಪಟ್ಟಂತೆ ಡ್ರಗ್ಸ್ ಕೇಸ್ ವಿಚಾರವಾಗಿ ಈ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.
ಇದನ್ನೂ ಓದಿ: ರಕ್ಷಿತ್ ಶೆಟ್ಟಿಯನ್ನ ನಟ ಕಿಚ್ಚ ಸುದೀಪ್ ಅಪ್ಪಿಕೊಂಡಿದ್ದು ಯಾಕೆ..?
ಈಗಾಗಲೇ ಆರೋಪಿಗಳಲ್ಲಿ ಕೆಲವರು ದೂರು ವಜಾಗೊಳಿಸಿ ಎಂದು ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್ ಸಲ್ಲಿಕೆಯಾದ ನಂತರದಲ್ಲಿ ಈ ಅರ್ಜಿಗಳ ವಿಚಾರಣೆ ನಡೆಸಲಾಗುವುದು. ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿರುವ ವ್ಯಕ್ತಿಗಳು ಕೋರ್ಟ್ ಮುಂದೆ ವಿಚಾರಣೆಗಾಗಿ ಹಾಜರಾಗಬೇಕಿದೆ. ಜುಲೈ 12ರಂದು ರಿಯಾ ಚಕ್ರವರ್ತಿ, ಶೋವಿಕ್ ಸೇರಿದಂತೆ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು. ಆಗ ಈ ದೂರಿನ ವಿಚಾರಣೆ ನಡೆಯಲಿದೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ವಿ ಜಿ ರಘುವಂಶಿ ಅವರು ಜುಲೈ 12 ರಂದು ವಿಚಾರಣೆಗೆ ಮುಂದೂಡಿದರು.
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್, ಪ್ರೇಕ್ಷಕರ ನೆಚ್ಚಿನ ಹೀರೋ ಆಗಿ ಗುರುತಿಸಿಕೊಂಡಿದ್ದರು. 2020ರ ಜೂನ್ 14ರಂದು ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಸಂದರ್ಭದಲ್ಲಿ ಸುಶಾಂತ್ ಪ್ರೇಯಸಿ ಆಗಿದ್ದ ರಿಯಾ ಚಕ್ರವರ್ತಿ ಮೇಲೆ ಆರೋಪ ಹೊರಿಸಲಾಯಿತು. ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಅವರನ್ನು ಸೆಪ್ಟೆಂಬರ್ 2020 ರಲ್ಲಿ ಬಂಧಿಸಲಾಯಿತು. ಅವರ ಬಂಧನದ ಸುಮಾರು ಒಂದು ತಿಂಗಳ ನಂತರ ಬಾಂಬೆ ಹೈಕೋರ್ಟ್ ಜಾಮೀನು ನೀಡಿತು.
ಇದನ್ನೂ ಓದಿ: MS Dhoni: ಕ್ರಿಕೆಟಿಗ ಧೋನಿ ನಿರ್ಮಾಣದ ಮೊದಲ ಚಿತ್ರಕ್ಕೆ ದಳಪತಿ ವಿಜಯ್ ಹೀರೋ!
ರಿಯಾ ಅಲ್ಲದೆ, ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಇತರ ಹಲವರನ್ನು ಮಾದಕವಸ್ತುಗಳ ಸೇವನೆ, ಸ್ವಾಧೀನ ಮತ್ತು ಹಣಕಾಸು ಆರೋಪದ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಜಾಮೀನಿನ ಮೇಲೆ ಹೊರಗಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.