ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ : ಹೊತ್ತಿ ಉರಿದ ಬಿಜೆಪಿ ಜಿಲ್ಲಾ ಕಚೇರಿ
ಪ್ರತಿಭಟನೆ ವೇಳೆ ಕಿಡಿಗೇಡಿಗಳು ಬಿಜೆಪಿ ಜಿಲ್ಲಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡೀ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬಳಿಕ ದುಷ್ಕರ್ಮಿಗಳೆಲ್ಲರೂ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
Attack on BJP Office : 'ಅಗ್ನಿಪಥ್' ಯೋಜನೆ ವಿರೋಧಿಸಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಕಿಡಿಗೇಡಿಗಳು ಬಿಜೆಪಿ ಜಿಲ್ಲಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡೀ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ. ಈ ಘಟನೆ ಬಳಿಕ ದುಷ್ಕರ್ಮಿಗಳೆಲ್ಲರೂ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಬಂಡುಕೋರರು ಬಿಜೆಪಿ ಕಚೇರಿಯನ್ನು ಗುರಿಯಾಗಿಸಿಕೊಂಡಿದ್ದಲ್ಲದೆ ಇಡೀ ಕಚೇರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ. ದುಷ್ಕರ್ಮಿಗಳು ಕಚೇರಿಯಲ್ಲಿದ್ದ ಪ್ರತಿಯೊಂದು ಪೀಠೋಪಕರಣಗಳನ್ನು ಒಡೆದು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ.
[[{"fid":"244564","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
ಇದನ್ನೂ ಓದಿ : 'ಅಗ್ನಿಪಥ್' ಯೋಜನೆ ವಿರೋಧಿಸಿ ಸೇನಾ ಆಕಾಂಕ್ಷಿಗಳಿಂದ ಭಾರೀ ಪ್ರತಿಭಟನೆ!
ಪೊಲೀಸರು ಇನ್ನೂ ಬಂದಿಲ್ಲ
ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಇನ್ನೂ ಬಂದಿಲ್ಲ. ಮತ್ತೊಂದೆಡೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್‌ಕುಮಾರ್ ಮುಂಡಾ ಸ್ಥಳಕ್ಕೆ ಆಗಮಿಸಿದ್ದು, ಪಕ್ಷದ ಕಚೇರಿಯಲ್ಲಿ ನಡೆದ ದುರ್ಘಟನೆಯ ಬಗ್ಗೆ ಅವಲೋಕನ ನಡೆಸಿದ್ದಾರೆ.
ಸೇನಾ ನೇಮಕಾತಿ ಅಭ್ಯರ್ಥಿಗಳು ನವಾಡದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಪ್ರಸ್ತುತ ಕಟ್ಟಡ ಸುಟ್ಟು ಭಸ್ಮವಾಗಿದೆ. ಇದಷ್ಟೇ ಅಲ್ಲದೆ, ವಾರಿಸಲಿಗಂಜ್‌ನ ಬಿಜೆಪಿ ಶಾಸಕಿ ಅರುಣಾ ದೇವಿ ಅವರ ಬೆಂಗಾವಲು ವಾಹನದ ಮೇಲೂ ದಾಳಿ ನಡೆದಿದೆ. ಆಕ್ರೋಶಗೊಂಡ ಯುವಕರು ಮಹಿಳಾ ಶಾಸಕರ ಕಾರಿಗೆ ಕಲ್ಲು ತೂರಿ ಗಾಜು ಒಡೆದಿದ್ದಾರೆ.
ಸಾಮ್ರಾಟ್ ಚೌಧರಿ ಸೇರಿದಂತೆ ಬಿಹಾರ ಸರ್ಕಾರದ ಮಂತ್ರಿಗಳು ಅಗ್ನಿಪಥ್ ಯೋಜನೆಯ ಬಗ್ಗೆ ಮಾತನಾಡಿ, 'ಯುವಕರಿಗೆ ತಲುಪಬೇಕಾದ ಸರಿಯಾದ ಸಂದೇಶ ತಲುಪಿಲ್ಲ ಎನಿಸುತ್ತಿದೆ. ಅವರಿಗೆ ಈ ಯೋಜನೆ ಅರ್ಥವಾಗಿಲ್ಲ. ಮೊದಲು ಯುವಕರು ಈ ಯೋಜನೆಯನ್ನು ಅರ್ಥಮಾಡಿಕೊಳ್ಳಬೇಕು. 4 ವರ್ಷಗಳ ಕಾಲ ದೇಶ ಸೇವೆ ಮಾಡಿದ ನಂತರ ಅವರು ಅನೇಕ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಇವರು ರಾಷ್ಟ್ರಪತಿಯಾದರೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತದೆ : ಬಿಜೆಪಿ ಸಂಸದ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.