Shivamogga: ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ನೇಣಿಗೆ ಶರಣು..!

Shivamogga Suicide case: ಮೂಲಗಳ ಪ್ರಕಾರ ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್‍ನೋಟ್ ಸಹ ಸಿಕ್ಕಿದ್ದು, ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Written by - Puttaraj K Alur | Last Updated : Jan 18, 2024, 03:30 PM IST
  • 8 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ನೇಣಿಗೆ ಶರಣು
  • ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಸಮೀಪ ದಾಸನಕೊಡಿಗೆಯಲ್ಲಿ ಘಟನೆ
  • ಅನಾರೋಗ್ಯದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್‍ನೋಟ್‍ನಲ್ಲಿ ಉಲ್ಲೇಖ
Shivamogga: ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ನೇಣಿಗೆ ಶರಣು..! title=
ವಿವಾಹಿತೆ ನೇಣಿಗೆ ಶರಣು..!

ಶಿವಮೊಗ್ಗ: 8 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಗೃಹಿಣಿಯೊಬ್ಬಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಸಮೀಪ ದಾಸನಕೊಡಿಗೆಯಲ್ಲಿ ಈ ಘಟನೆ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ ಎನ್ನಲಾಗ್ತಿದೆ. ಮೃತ ಗೃಹಿಣಿಯ ಹೆಸರು 24 ವರ್ಷದ ಶಮಿತಾ ಎಂದು ತಿಳಿದುಬಂದಿದೆ. ಇವರ ಪತಿ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ರಾತ್ರಿ ಪಾಳಿ ಇದ್ದಿದ್ದರಿಂದ ಕೆಲಸಕ್ಕೆ ಹೋಗಿದ್ದರು.

ಇದನ್ನೂ ಓದಿ: ಶಾಸಕ ಉದಯ್ ಗರುಡಾಚಾರ್’ಗೆ ಲಘು ಹೃದಯಾಘಾತ

ಅಂದು ರಾತ್ರಿ ವೇಳೆ ಶಮಿತಾ ಮನೆಯ ಉಪ್ಪರಿಗೆ ಮೇಲಿದ್ದ ಕೋಣೆಗೆ ಹೋಗಿ ಮಲಗಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಬರದ ಕಾರಣ ಮನೆಯವರು ಬಾಗಿಲು ತಟ್ಟಿದ್ದಾರೆ. ಅನುಮಾನಗೊಂಡು ಕಿಟಕಿಯಲ್ಲಿ ಇಣುಕಿ ನೋಡಿದಾಗ ಶಮಿತಾರ ಮೃತದೇಹ ಕಂಡುಬಂದಿದೆ.

ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿ ಸ್ಥಳೀಯರು ಮನೆಯ ಬಳಿ ಜಮಾಯಿಸಿದ್ದಾರೆ. ಮೃತಳ ಪೋಷಕರು ಬರುವರೆಗೂ ಕೋಣೆಯ ಬಾಗಿಲು ತೆಗೆದಿರಲಿಲ್ಲ. ಅಂತಿಮವಾಗಿ ಪಂಚರು ಹಾಗೂ ಪೋಷಕರ ಸಮ್ಮುಖದಲ್ಲಿ ಬಾಗಿಲು ಒಡೆದು ಶಮಿತಾರ ಮೃತದೇಹವನ್ನು ಕೆಳಗೆ ಇಳಿಸಿ, ನಂತರ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.    

ಇದನ್ನೂ ಓದಿ: ವಾಯುಕರಾರ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರ ಹೆಸರಲ್ಲಿ ವಂಚನೆ

ಮೂಲಗಳ ಪ್ರಕಾರ ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್‍ನೋಟ್ ಸಹ ಸಿಕ್ಕಿದ್ದು, ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News