ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ; ಕಾರಣವೇನು ಗೊತ್ತಾ..?

ಪೂಜಾಗೆ ಅತ್ತೆ ಶಶಿಕಲಾ, ಭಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು ಅಂತಾ ಆರೋಪಿಸಲಾಗಿದೆ. ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾಳ ಕುಟುಂಬಸ್ಥರು ಆರೋಪಿಸಿದ್ದಾರೆ. 

Written by - Puttaraj K Alur | Last Updated : Apr 15, 2025, 04:30 PM IST
  • ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ
  • ಗದಗ ಜಿಲ್ಲೆಯ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನಡೆದಿರುವ ಘಟನೆ
  • ಪ್ರತಿನಿತ್ಯ ಅತ್ತೆ, ಭಾವ ಹಾಗೂ ಮಾವ ಕಿರುಕುಳ ನೀಡುತ್ತಿದ್ದರೆಂಬ ಆರೋಪ
ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ಆತ್ಮಹತ್ಯೆ; ಕಾರಣವೇನು ಗೊತ್ತಾ..?

Gadag Crime News: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಬೆಟಗೇರಿಯ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.

Add Zee News as a Preferred Source

ಪೂಜಾ ಅಮರೇಶ ಅಯ್ಯನಗೌಡರ್ (27) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಡೆತ್‌ನೋಟ್ ಬರೆದಿಟ್ಟು ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ. 

ಇದನ್ನೂ ಓದಿ: ಅಕ್ರಮ ಸಂಬಂಧ ಬಯಲು ಮಾಡಿದ ಮಗಳ ಬೆತ್ತಲೆ ವಿಡಿಯೋ ಮಾಡಿ ವೈರಲ್‌ ಮಾಡಿದ ತಾಯಿ!!

ಪೂಜಾಗೆ ಅತ್ತೆ ಶಶಿಕಲಾ, ಭಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು ಅಂತಾ ಆರೋಪಿಸಲಾಗಿದೆ. ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾಳ ಕುಟುಂಬಸ್ಥರು ಆರೋಪಿಸಿದ್ದಾರೆ. 

ಅಲ್ಲದೇ ಅತ್ತೆ, ಮಾವ ಮತ್ತು ಭಾವ ಸೇರಿಕೊಂಡು ಪೂಜಾಳನ್ನ ನೇಣು ಹಾಕಿ ಕೊಲೆ ಮಾಡಿದ್ದಾರೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಭಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: ಚುನಾವಣೆಯಲ್ಲಿ ಶೇ.50ರಷ್ಟು ಮುಸ್ಲಿಂ ಅಭ್ಯರ್ಥಿಗಳಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಿ: ಪ್ರಧಾನಿ ಮೋದಿ

4 ತಿಂಗಳ ಹಿಂದೆಯಷ್ಟೇ ಅಮರೇಶ್ ಎಂಬಾತನನ್ನ‌ ಪೂಜಾ ಮದುವೆಯಾಗಿದ್ದಳು. ಪತಿ ಅಮರೇಶ್ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರಂತೆ. ಯಾರೂ ಇಲ್ಲದ ವೇಳೆ ಮನೆಯಲ್ಲಿ ಪೂಜಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News