ಭಟ್ಕಳ: ಭಟ್ಕಳದಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ದಳ(NIA)ದ ಅಧಿಕಾರಿಗಳು ಪಾಕಿಸ್ತಾನದ ಗುಪ್ತಚರ ಪಡೆಯ ಐಎಸ್‌ಐ ಉಗ್ರ ಸಂಘಟೆ ಜೊತೆಗೆ ನಂಟು ಹೊಂದಿರುವ ಹಿನ್ನೆಲೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದ.


COMMERCIAL BREAK
SCROLL TO CONTINUE READING

ಸ್ಥಳೀಯ ಗುಪ್ತಚರ ಪೊಲೀಸರ ನೆರವಿನಿಂದ ಭಾನುವಾರ ಬೆಳಗ್ಗೆ 4 ಗಂಟೆ ವೇಳೆಗೆ ದಾಳಿ ನಡೆಸಿರುವ NIA ನಗರ ವ್ಯಾಪ್ತಿಯ ಅಬ್ದುಲ್ ಮುಕ್ತದೀರ್ ಮತ್ತು ಆತನ ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಉಗ್ರ ಸಂಘಟನೆಯ ಬರಹಗಳ ಭಾಷಾಂತರಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿವೆ. ಆದರೆ, ಇನ್ನಿತರ ವಿಷಯಗಳ ಕುರಿತ ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


ಇದನ್ನೂ ಓದಿ: ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳಿಂದಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಿಜೆಪಿ ಆರೋಪ


ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ NIA ದಾಳಿ!


ಕರ್ನಾಟಕವೂ ಸೇರಿದಂತೆ ಒಟ್ಟು 6 ರಾಜ್ಯಗಳಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ. 6 ರಾಜ್ಯಗಳ 13 ಕಡೆ ದಾಳಿ ನಡೆಸಿ NIA ಶೋಧಕಾರ್ಯ ನಡೆಸಿದೆ. ಮಧ್ಯಪ್ರದೇಶದ ಭೂಪಾಲ್, ರಾಯ್ ಸೇನ್, ಗುಜರಾತ್‍ನ ಬರೂಚ್, ಸೂರತ್, ನವಸಾರಿ, ಅಹ್ಮದಾಬಾದ್‍, ಬಿಹಾರದ ಅರಾರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ನಾಂದೇಡ್, ಉತ್ತರ ಪ್ರದೇಶದ ದಿಯೋಬಂಡ್ ಹಾಗೂ ಕರ್ನಾಟಕದ ತುಮಕೂರು ಮತ್ತು ಭಟ್ಕಳದಲ್ಲಿ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಾಕಷ್ಟು ದಾಖಲೆಗಳು ಪತ್ತೆಯಾಗಿದ್ದು, ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.


ಚಿಕ್ಕೋಡಿಯಲ್ಲಿ ಸಂಶಯಾಸ್ಪದ ಯುವಕ ವಶಕ್ಕೆ


ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಸಿಬಿ ಪೊಲೀಸರು ಸಂಶಯಾಸ್ಪದ ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಯುವಕನನ್ನು CCB ಅಧಿಕಾರಿಗಳು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದವರಿಗೆ ಸಹಾಯ ಮಾಡಿರುವ ಆರೋಪ ಹಿನ್ನೆಲೆ ಯುವಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಯುವಕ ಆನ್ಲೈನ್ ಕಂಪ್ಯೂಟರ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.


ಇದನ್ನೂ ಓದಿ: ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ಹೆಚ್.ಡಿ.ಕುಮಾರಸ್ವಾಮಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.