NIA Raids Five Arrested: ದೇಶಾದ್ಯಂತ ಬಹು-ರಾಜ್ಯಗಳಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಂತರರಾಷ್ಟ್ರೀಯ ಮಾನವ ಕಳ್ಳಸಾಗಣೆ ಮತ್ತು ಸೈಬರ್ ವಂಚನೆ ಸಿಂಡಿಕೇಟ್‌ನಲ್ಲಿ (International Human Trafficking And Cyber Fraud Syndicate) ಭಾಗಿಯಾಗಿರುವ ಐವರನ್ನು ಬಂಧಿಸಿದೆ. ಬಂಧಿತ ಆರೋಪಿಗಳು ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಭಾರತೀಯ ಯುವಕರನ್ನು ವಿದೇಶಗಳಿಗೆ ಸೆಳೆಯುತ್ತಿದ್ದರು ಎಂದು ಅಧಿಕೃತ ಮೂಲಗಳಿಂದ ಮಾಹಿತಿ ದೊರೆತಿದೆ. 


COMMERCIAL BREAK
SCROLL TO CONTINUE READING

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಚಂಡೀಗಢದ 15 ಸ್ಥಳಗಳಲ್ಲಿ ದಾಳಿ ನಡೆಸಿ ವಡೋದರದ ಮನೀಶ್ ಹಿಂಗು, ಗೋಪಾಲ್‌ಗಂಜ್‌ನ ಪಹ್ಲಾದ್ ಸಿಂಗ್, ನೈಋತ್ಯ ದೆಹಲಿಯ ನಬಿಯಾಲಂ ರೇ, ಗುರುಗ್ರಾಮದ ಬಲ್ವಂತ್ ಕಟಾರಿಯಾ ಮತ್ತು ಚಂಡೀಗಢದ ಸರ್ತಾಜ್ ಸಿಂಗ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಎನ್ಐಎ (NIA) ಹೇಳಿದೆ.


ಇದನ್ನೂ ಓದಿ- ರಾಜ್ಯದಲ್ಲಿ ಗುಟ್ಕಾ ತಯಾರಿಕೆ ಮತ್ತು ಮಾರಾಟ ನಿಷೇಧ..! ಸರ್ಕಾರದಿಂದ ಮಹತ್ವದ ನಿರ್ಧಾರ


ಎನ್‌ಐಎ ದಾಳಿಯಲ್ಲಿ (NIA Raids) ಬಂಧಿತರಾಗಿರುವ ವ್ಯಕ್ತಿಗಳು ಲಾವೋಸ್ ಮತ್ತು ಕಾಂಬೋಡಿಯಾದಲ್ಲಿನ ಗೋಲ್ಡನ್ ಟ್ರಯಾಂಗಲ್ ಸ್ಪೆಷಲ್ ಎಕನಾಮಿಕ್ ಝೋನ್ (SEZ) ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನೆಲೆಗೊಂಡಿರುವ ನಕಲಿ ಕಾಲ್ ಸೆಂಟರ್‌ಗಳಲ್ಲಿ ಕೆಲಸ ಮಾಡುವಂತೆ ಭಾರತೀಯ ಯುವಕರನ್ನು ಒತ್ತಾಯಿಸುತ್ತಿದ್ದರು. ಇದಲ್ಲದೆ, ವಿದೇಶಿ ಪ್ರಜೆಗಳಿಂದ ನಡೆಸಲ್ಪಡುವ ಸಿಂಡಿಕೇಟ್, ಕ್ರೆಡಿಟ್ ಕಾರ್ಡ್ ವಂಚನೆ, ಮೋಸದ ಅಪ್ಲಿಕೇಶನ್‌ಗಳ ಮೂಲಕ ಕ್ರಿಪ್ಟೋಕರೆನ್ಸಿ ಹೂಡಿಕೆಗಳು ಮತ್ತು ಹನಿ ಟ್ರ್ಯಾಪಿಂಗ್‌ನಂತಹ ಅಕ್ರಮ ಆನ್‌ಲೈನ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಭಾರತೀಯ ಯುವಕರನ್ನು ಒತ್ತಾಯಿಸಲಾಗುತ್ತಿತ್ತು ಎಂದು ಹೇಳಲಾಗುತ್ತಿದೆ. 


ಇದನ್ನೂ ಓದಿ- IT Raid: 26 ಕೋಟಿ ರೂ. ನಗದು, 90 ಕೋಟಿ ಮೌಲ್ಯದ ಆಸ್ತಿ ಜಪ್ತಿ!


ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) (National Investigation Agency (NIA)) ವಕ್ತಾರರ ಪ್ರಕಾರ, ದೇಶದಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಗುಜರಾತ್‌ನ 15 ಸ್ಥಳಗಳಲ್ಲಿ ನಡೆಸಲಾಗಿರುವ ಈ ದಾಳಿಯಲ್ಲಿ, "ಶೋಧನೆಗಳು ದಾಖಲೆಗಳು, ಡಿಜಿಟಲ್ ಸಾಧನಗಳು, ಕೈಬರಹದ ರೆಜಿಸ್ಟರ್‌ಗಳು, ಬಹು ಪಾಸ್‌ಪೋರ್ಟ್‌ಗಳು, ನಕಲಿ ಸಾಗರೋತ್ತರ ಉದ್ಯೋಗ ಪತ್ರಗಳು ಸೇರಿದಂತೆ ಹಲವಾರು ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ". ಇದಲ್ಲದೆ, ಎಂಟು ಹೊಸ ಎಫ್‌ಐಆರ್‌ಗಳನ್ನು ವಿವಿಧ ರಾಜ್ಯ/ಯುಟಿ ಪೊಲೀಸ್ ಪಡೆಗಳು ದಾಖಲಿಸಿವೆ ಮತ್ತು ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.