ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ಸೋಮವಾರ ನಡೆದಿದೆ.


COMMERCIAL BREAK
SCROLL TO CONTINUE READING

ಬಡ್ತಿ ಪಡೆದು ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಮೃತ ಅಧಿಕಾರಿ. ಇವರು ಧಾರವಾಡದ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ಆದರೆ ಬಡ್ತಿಯಿಂದ ಸಿಕ್ಕ ಅಧಿಕಾರದಲ್ಲಿ ಒಂದು ದಿನವೂ ಕಳೆಯದೆ ಇಹಲೋಕ ತ್ಯೆಜಿಸಿದ್ದಾರೆ.


ಇದನ್ನೂ ಓದಿ: ‘ಇಂಡಿಯಾ’ ಬದಲು ‘ಭಾರತ್’ ಎಂದು ದೇಶದ ಹೆಸರು ಬದಲಾವಣೆ?


ಸೋಮವಾರ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದ ಜಯಪ್ರಕಾಶ ಕಲಕೋಟಿ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲುಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ್ ಅವರು ಕೆಲಸ ಮಾಡುತ್ತಿದ್ದರು.


15 ದಿನಗಳ ಹಿಂದಷ್ಟೇ ಜಯಪ್ರಕಾಶರಿಗೆ ಬಡ್ತಿ ಲಭಿಸಿತ್ತು. ಧಾರವಾಡ ಜಿಲ್ಲಾ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದ ಅವರಿಗೆ ಸಂಜೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.  


ಇದನ್ನೂ ಓದಿ: ಮೈಸೂರು ಅರಮನೆಗೆ ಆಗಮಿಸಿದ ದಸರಾ ಗಜಪಡೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.