ಪ್ಲಾಸ್ಟಿಕ್ ಕಾರ್ಖಾನೆಗಳಿಗೆ ಅಧಿಕಾರಿಗಳ ದಾಳಿ: 810 ಕೆ.ಜಿ. ಪ್ಲಾಸ್ಟಿಕ್ ವಶ

ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.  ದಾಳಿ ವೇಳೆ ಸುಮಾರು 810 ಕೆ.ಜಿ.ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿದೆ.

Written by - Manjunath Hosahalli | Edited by - Manjunath N | Last Updated : Jul 22, 2022, 11:16 PM IST
  • ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಪ್ಲಾಸ್ಟಿಕ್ ಕಾರ್ಖಾನೆಗಳಿಗೆ ಅಧಿಕಾರಿಗಳ ದಾಳಿ: 810 ಕೆ.ಜಿ. ಪ್ಲಾಸ್ಟಿಕ್ ವಶ title=

ಬೆಂಗಳೂರು: ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳ ಮೇಲೆ ಬಿಬಿಎಂಪಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.  ದಾಳಿ ವೇಳೆ ಸುಮಾರು 810 ಕೆ.ಜಿ.ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಪೃಥ್ವಿ ಅಂಬರ್ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್

ದಾಳಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ದಾಸರಹಳ್ಳಿ ವಲಯದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್‌ ಸೂಪರ್‌ವೈಜರ್‌ ಮತ್ತು ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದಿವಂಗತ ಸಂಚಾರಿ ವಿಜಯ್‌ ಸಿನಿಮಾಗೆ ಮತ್ತೊಂದು ರಾಷ್ಟ್ರಪಶಸ್ತಿ..!

ವಶಪಡಿಸಿಕೊಂಡ ನಿಷೇಧಿತ ಪ್ಲಾಸ್ಟಿಕ್ ಅನ್ನು ಮಾನ್ಯ ಮುಖ್ಯ ಆಯುಕ್ತರು ದಾಸರಹಳ್ಳಿ ವಲಯ ಕಛೇರಿಗೆ ಭೇಟಿ ನೀಡಿದಾಗ ಪರಿಶೀಲಿಸಿ, ವಶಪಡಿಸಿಕೊಂಡ ಪ್ಲಾಸ್ಟಿಕ್ ಅನ್ನು ಚೂರು ಚೂರು ಮಾಡಿ ಹರಾಜು ಮುಖಾಂತರ ವಿಲೇವಾರಿ ಮಾಡಲು ಸೂಚನೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News