ಹಾಸನ : ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಯತ್ನಿಸಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ.
ಹೊಳೆನರಸಿಪುರ ತಾಲ್ಲೂಕಿನ ನಗರನಹಳ್ಳಿ ಗ್ರಾಮದ 24 ವರ್ಷದ ಯುವ ಮೃತ ದುರ್ದೈವಿ. ಇದೇ ತಾಲ್ಲೂಕಿನ ಯುವತಿಯನ್ನು ಈತ ಪ್ರೀತಿಸುತ್ತಿದ್ದ ಎಂದು ತಿಳಿದಬಂದಿದೆ. ಯುವತಿ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮೈಸೂರಿನಲ್ಲಿ ಯುವಕ ಕೆಲಸ ಮಾಡಿಕೊಂಡಿದ್ದ.
ಇದನ್ನೂ ಓದಿ: ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಇಬ್ಬರು ಪ್ರೇಮಿಗಳು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಪೋಷಕರು ಇವರ ಮದುವೆಗೆ ವಿರೋಧಿಸಿದ್ದರು. ಪೋಷಕರ ವಿರೋಧದಿಂದ ಮನನೊಂದ ಪ್ರೇಮಿಗಳು ನಿನ್ನೆ ಮಧ್ಯಾಹ್ನ ಒಟ್ಟಿಗೆ ವಿಷ ಸೇವಿಸಿ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು.
ರೈಲ್ವೆ ಟ್ಯ್ರಾಕ್ ಮೇಲೆ ಒದ್ದಾಡುತ್ತಿದ್ದ ಇಬ್ಬರನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಮ್ಮ ಜೀಪ್ನಲ್ಲೇ ಇಬ್ಬರನ್ನೂ ಕರೆತಂದು ಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿ ಅಧಿಕಾರಿಗಳ ವಶಕ್ಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.