ಹಣಕ್ಕಾಗಿ ಉದ್ಯಮಿ ಅಪಹರಿಸಿದ: ಐ‌ಎಎಸ್ ಆಗಬೇಕಿದ್ದವನು ಪೊಲೀಸರ ಅತಿಥಿಯಾದ..!

Crime News: ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು‌‌. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು. 

Written by - VISHWANATH HARIHARA | Last Updated : Jan 12, 2024, 02:18 PM IST
  • ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಸಚಿನ್ 'ತನಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪರಿಚಯದವರಿದ್ದಾರೆ. ತಾನೇ ಸೀಟು ಕೊಡಿಸುತ್ತೇನೆ ಎಂದಿದ್ದ.
  • ಸೀಟು ಕೊಡಿಸಿದ ಮೇಲೆ 4 ಲಕ್ಷ ಹಣ ಕೊಡಬೇಕು ಎಂದಿದ್ದ.
  • ಆದರೆ ಸೀಟು ಕೊಡಿಸದೇ ವಿಳಂಬ ಮಾಡಿದ್ದರಿಂದ ಬೇರೊಬ್ಬರ ಮೂಲಕ ಚೇತನ್ ಶಾ ತಮ್ಮ ಮಗಳಿಗೆ ಸೀಟು ಕೊಡಿಸಿದ್ದರು.
ಹಣಕ್ಕಾಗಿ ಉದ್ಯಮಿ ಅಪಹರಿಸಿದ:  ಐ‌ಎಎಸ್ ಆಗಬೇಕಿದ್ದವನು ಪೊಲೀಸರ ಅತಿಥಿಯಾದ..! title=

ಬೆಂಗಳೂರು :  ಉದ್ಯಮಿಯನ್ನ ಅಪಹರಿಸಿ ಬೆದರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರನ್ನ ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಚಿನ್ ಹಾಗೂ ಗೌರಿಶಂಕರ್ ಬಂಧಿತ ಆರೋಪಿಗಳು. ಜನವರಿ 5ರಂದು ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಿಂದ ಉದ್ಯಮಿ ಚೇತನ್ ಶಾ ಎಂಬಾತನನ್ನ ಅಪಹರಿಸಿದ್ದ ಆರೋಪಿಗಳು, ಆತನನ್ನ ಬೆದರಿಸಿ 7 ಲಕ್ಷ ರೂ. ವಸೂಲಿ ಮಾಡಿದ್ದರು. ಬಳಿಕ ತಾನೇ ಹಣ ಕೊಡುತ್ತಿರುವುದಾಗಿ ಚೇತನ್ ಶಾನಿಂದ ಸ್ವಯಂ ಹೇಳಿಕೆ ಕೊಡಿಸಿ, ಅದರ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬಿಟ್ಟು ಪರಾರಿಯಾಗಿದ್ದರು.

ಉದ್ಯಮಿಯಾಗಿರುವ ಚೇತನ್ ಶಾರವರು 2023ನೇ ಸಾಲಿನಲ್ಲಿ ತಮ್ಮ ಮಗಳಿಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಬಿಬಿಎ ಸೀಟಿಗಾಗಿ ಪ್ರಯತ್ನಿಸುತ್ತಿದ್ದರು‌‌. ಆ ಸಂದರ್ಭದಲ್ಲಿ ಚೇತನ್ ಶಾರ ಮಗಳ ಸ್ನೇಹಿತನೊಬ್ಬನ ಮೂಲಕ ಆರೋಪಿ ಸಚಿನ್ ಪರಿಚಯವಾಗಿತ್ತು. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಸಚಿನ್ 'ತನಗೆ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪರಿಚಯದವರಿದ್ದಾರೆ. ತಾನೇ ಸೀಟು ಕೊಡಿಸುತ್ತೇನೆ ಎಂದಿದ್ದ. ಸೀಟು ಕೊಡಿಸಿದ ಮೇಲೆ 4 ಲಕ್ಷ ಹಣ ಕೊಡಬೇಕು ಎಂದಿದ್ದ. ಆದರೆ ಸೀಟು ಕೊಡಿಸದೇ ವಿಳಂಬ ಮಾಡಿದ್ದರಿಂದ ಬೇರೊಬ್ಬರ ಮೂಲಕ ಚೇತನ್ ಶಾ ತಮ್ಮ ಮಗಳಿಗೆ ಸೀಟು ಕೊಡಿಸಿದ್ದರು.

ಇದನ್ನೂ ಓದಿ- ಮಗು ಮಾರಾಟ ಜಾಲ ಭೇದಿಸಿದ ಪೊಲೀಸರು: ತಾಯಿ ಸೇರಿ ಐವರ ಬಂಧನ

ಕಳೆದ ಮೇ ತಿಂಗಳಿನಲ್ಲಿ ಚೇತನ್ ಶಾರನ್ನ ಭೇಟಿಯಾಗಿದ್ದ ಸಚಿನ್, ನಿಮ್ಮ ಮಗಳಿಗೆ ಸೀಟು ಕೊಡಿಸಿದ್ದು ನಾನೇ, ನನಗೆ 4 ಲಕ್ಷ ರೂ. ಕೊಡಬೇಕು ಎಂದು ಒತ್ತಾಯಿಸಿದ್ದ. ಆದರೆ ಹಣ ಕೊಡಲು ಚೇತನ್ ಶಾ ಒಪ್ಪಿರಲಿಲ್ಲ. ಆ ಸಂದರ್ಭದಲ್ಲಿ ಬೆದರಿಕೆ ಹಾಕಿದ್ದ ಸಚಿನ್, ನಂತರ ಬೇರೆ ಬೇರೆ ವ್ಯಕ್ತಿಗಳಿಂದ ಬೆದರಿಕೆ ಕರೆ ಮಾಡಿಸಿದ್ದ. 

ಜನವರಿ  5ರಂದು ಪೀಣ್ಯದ ತಮ್ಮ ಇಂಡಸ್ಟ್ರಿಯಿಂದ ಮನೆಗೆ ತೆರಳುತ್ತಿದ್ದಾಗ ರಾಜಾಜಿನಗರ ಡಾ‌.ರಾಜ್‌ಕುಮಾರ್ ರಸ್ತೆಯ ಸಿಗ್ನಲ್ ಬಳಿ ಆಟೋದಲ್ಲಿ ಬಂದು ಚೇತನ್ ಶಾರ ಕಾರನ್ನ ಅಡ್ಡಗಟ್ಟಿ ಸಚಿನ್ ಮತ್ತು ಆತನ ಸ್ನೇಹಿತರು, ಅವರದ್ದೇ ಕಾರಿನಲ್ಲಿ ಅಪಹರಿಸಿ ಕಾರ್ಡ್ ರಸ್ತೆಯಲ್ಲಿ ಸುತ್ತಾಡಿಸಿದ್ದರು. ಸೀಟು ಕೊಡಿಸಿದ್ದಕ್ಕಾಗಿ 4 ಲಕ್ಷ ರೂ, ಬಡ್ಡಿ 2 ಲಕ್ಷ ರೂ. ಹಾಗೂ ತನ್ನ ಹುಡುಗರಿಗೆ 1 ಲಕ್ಷ ರೂ, ಒಟ್ಟು 7 ಲಕ್ಷ ರೂ. ಕೊಡುವಂತೆ ಸಚಿನ್ ಬೆದರಿಕೆ ಹಾಕಿದ್ದರು. ಈ ವೇಳೆ ಚೇತನ್ ಮನೆಗೆ ಓರ್ವ ಆರೋಪಿಯನ್ನ ಕಳುಹಿಸಿ, ಆತನ ಹೆಂಡತಿಯ ಬಳಿಯಿಂದ 7 ಲಕ್ಷ ರೂ. ಹಣ ಪಡೆದಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಚೇತನ್ ಶಾರನ್ನ ಬಿಟ್ಟು ಕಳುಹಿಸಿದ್ದರು. 

ಇದನ್ನೂ ಓದಿ- ಸೂರ್ಯ, ರಮ್ಯಕೃಷ್ಣ ಸಿನಿಮಾ ನೋಡಿ ಸುಲಿಗೆ: ನಕಲಿ ಲೋಕಾಯುಕ್ತ ಅಧಿಕಾರಿ ಅಂದರ್

ಈ ಹಿನ್ನೆಲೆ ಚೇತನ್ ಶಾ ರಾಜಾಜಿನಗರ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ರಾಜಾಜಿನಗರ ಠಾಣಾ ಪೊಲೀಸರು, ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತ ಸಚಿನ್ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದನಂತೆ. ಬಂಧಿತರಿಂದ 7 ಲಕ್ಷ  ರೂ.ನಗದು, ಮೊಬೈಲ್ ಫೋನ್‌ಗಳನ್ನ ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳನ್ನು ಜೈಲಿಗಟ್ಟಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News