KPTCL ಅಕ್ರಮ ನೇಮಕಾತಿ ಪ್ರಕರಣ: ಮತ್ತೆ ಇಬ್ಬರ ಬಂಧನ

KPTCL illegal recruitment case : ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು, ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು ಬಂಧಿತರ ಸಂಖ್ಯೆ ಇಪ್ಪತ್ತೆರಡಕ್ಕೆ ಏರಿಕೆಯಾಗಿದೆ.

Written by - Zee Kannada News Desk | Last Updated : Oct 19, 2022, 10:09 AM IST
  • ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣ
  • ಬೆಳಗಾವಿಯಲ್ಲಿ ಮತ್ತೆ ಇಬ್ಬರ ಬಂಧನ
  • ಇಪ್ಪತ್ತೆರಡಕ್ಕೆ ಏರಿಕೆಯಾದ ಬಂಧಿತರ ಸಂಖ್ಯೆ
KPTCL ಅಕ್ರಮ ನೇಮಕಾತಿ ಪ್ರಕರಣ: ಮತ್ತೆ ಇಬ್ಬರ ಬಂಧನ  title=
ಕೆಪಿಟಿಸಿಎಲ್

ಬೆಳಗಾವಿ: ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು, ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದು ಬಂಧಿತರ ಸಂಖ್ಯೆ ಇಪ್ಪತ್ತೆರಡಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ‌ ಮಹದೇವಪ್ಪ ರಕ್ಷಿ(26)ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ದೊಡ್ಡಮನಿ(27) ಬಂಧಿತರು. 

ಇದನ್ನೂ ಓದಿ : ಚುನಾವಣೆಗೆ ತಯಾರಿ ನಡೆಸುತ್ತಿದ್ದ ಪಿಎಫ್‌ಐ ಅಭ್ಯರ್ಥಿಗಳ ಬ್ಯಾಂಕ್ ವಿವರ ಕೇಳಿದ ಎನ್‌ಐಎ

ಇಬ್ಬರು ಆರೋಪಿಗಳು ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದ್ದು ಮಲ್ಲಪ್ಪ ರಕ್ಷಿ ಇಲೆಕ್ಟ್ರಾನಿಕ್ ಡಿವೈಸ್‌ ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷಾ ಅಭ್ಯರ್ಥಿಗಳಿಗೆ ಕೊಟ್ಟಿದ್ದಲ್ಲದೇ ಉತ್ತರ ಹೇಳಿದ ಆರೋಪವಿದೆ. ಆತನ ಬಳಿಯಿದ್ದ ಒಂದು ಮೊಬೈಲ್, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ.ಇನ್ನೂ ನಾಗೇಶ ದೊಡ್ಡಮನಿ ಇಲೆಕ್ಟ್ರಾನಿಕ್ ಡಿವೈಸ್‌ ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದ ಆರೋಪವಿದೆ.

ಜಾಮೀನು ಸಿಕ್ಕು ಹೊತಬರುತ್ತಿದ್ದಂತೆ ಮತ್ತೊಂದು ಕೇಸ್ ನಲ್ಲಿ ಅರೆಸ್ಟ್:

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಸಂಜೀವ ಲಕ್ಷ್ಮಣ ಭಂಡಾರಿ ಸೇರಿದಂತೆ 20 ಆರೋಪಿಗಳಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಜೆಎಂಎಫ್‌ಸಿ ಎರಡನೇ ಕೋರ್ಟ್‌ನ ಷರತ್ತುಬದ್ಧ ಜಾಮೀನು ನೀಡಿತ್ತು. ಈ ನಡುವೆ ಸಂಜೀವ ಭಂಡಾರಿ ಜಾಮೀನು ಪಡೆದು ಕೋರ್ಟ್‌ನಿಂದ ಹೊರಬರುತ್ತಿದ್ದಂತೆಯೇ ಆತನನ್ನು ಇನ್ನೊಂದು ಪ್ರಕರಣದಲ್ಲಿ ಬಂಧಿಸಲಾಗಿದೆ. 

ಇದನ್ನೂ ಓದಿ : ಆಕ್ಸಿಸ್ ಬ್ಯಾಂಕ್ ಗ್ರಾಹಕರಿಗೆ ಆಘಾತ.! ಈ ನಿಯಮ ಬದಲಿಸಿದ ಬ್ಯಾಂಕ್

ಕೆಪಿಟಿಸಿಎಲ್ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿ ಅಕ್ರಮದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾನೆ. 

ಬೆಳಗಾವಿಯ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳು ಆತನನ್ನು ಹಿಡಿದುಕೊಂಡಿದ್ದಾರೆ. ಈತನ ಮೇಲೆ 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪವಿದೆ. ಇದೀಗ ಸಂಜೀವ ಭಂಡಾರಿಯನ್ನು ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,ಆತನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಲಾಗಿದೆ‌.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News