ಮಗು ಮಾರಾಟ ಜಾಲ ಭೇದಿಸಿದ ಪೊಲೀಸರು: ತಾಯಿ ಸೇರಿ ಐವರ ಬಂಧನ
ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಖರೀದಿಸಿದ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.
ಹಾಸನ: ತನಗೆ ಇಬ್ಬರು ಗಂಡು ಮಕ್ಕಳಿದ್ದು, ಮತ್ತೊಂದು ಮಗು ಬೇಡವೆಂದು ಜನಿಸಿದ ಒಂದೇ ದಿನಕ್ಕೆ ಮಗು ಮಾರಾಟ ಮಾಡುತ್ತಿದ್ದ ತಾಯಿ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಗಿರಿಜಾ ಎಂಬುವವರು ಚಿಕ್ಕಮಗಳೂರಿನ ಮಹಿಳೆಗೆ ಮಗು ಮಾರಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ- ಕಾರ್ಮಿಕರು ಮಲಗಿದ್ದ ಗುಡಿಸಲಿಗೆ ನುಗ್ಗಿದ ಲಾರಿ: ಐವರ ಸ್ಥಿತಿ ಗಂಭೀರ
ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗುವನ್ನು ಖರೀದಿಸಿದ ಮಹಿಳೆ ಉಷಾ ಹಾಗೂ ಮಗು ಕೊಡಲು ಪ್ರೇರಣೆ ನೀಡಿದ ಆರೋಪದಲ್ಲಿ ಶ್ರೀಕಾಂತ್ ಹಾಗು ಸುಬ್ರಹ್ಮಣ್ಯ ಎಂಬುವವರ ಬಂಧಿಸಲಾಗಿದೆ.
2023ರ ನ. 15 ರಂದು ಸಕಲೇಶಪುರ ತಾಲ್ಲೂಕಿನ ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಗಿರಿಜಾ ನ. 16 ರಂದು ಚಿಕ್ಕಮಗಳೂರು ಮೂಲದ ಉಷಾ ಎಂಬ ಮಹಿಳೆಗೆ ಅನಧಿಕೃತವಾಗಿ ಮಗು ಹಸ್ತಾಂತರ ಆಗಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಲಾಗಿತ್ತು.
ಇದನ್ನೂ ಓದಿ- ಟ್ರಾಕ್ಟರ್ ಇನೋವಾ ಕಾರ್ ನಡುವೆ ಅಪಘಾತ
ದೂರು ಆಧರಿಸಿ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್ ನೇತೃತ್ವದ ತಂಡ ಪೊಲೀಸರ ಸಹಕಾರದಿಂದ ಪ್ರಕರಣ ಭೇದಿಸಿದ್ದು ಇದೀಗ ಮಗುವಿನ ತಾಯಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.