)
Crime News: ಬೀದರ್ನ ನ್ಯೂ ಆದರ್ಶ ಕಾಲೋನಿಯಲ್ಲಿ ಸ್ಟುಡಿಯೋದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನ ಗಾಂಧಿಗಂಜ್ ಪೊಲೀಸ್ ಠಾಣೆ ಪೊಲೀಸರು 2 ದಿನಗಳಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೇ ಆಗಸ್ಟ್ 10ನೇ ತಾರೀಖು ಪೊಟೋ ಸ್ಟುಡಿಯೋಗೆ ನುಗ್ಗಿದ ಖದೀಮ 2.70 ಲಕ್ಷ ಮೌಲ್ಯದ ವಸ್ತುಗಳನ್ನ ಕಳ್ಳತನ ಮಾಡಿ ಬಳಿಕ ಅಂಗಡಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದನು. ಬಳಿಕ ಅದೇ ದಿನ ಮತ್ತೊಂದು ಮೊಬೈಲ್ ಶಾಪ್ ಕಳ್ಳತನ ಮಾಡಿ ಪರಾರಿಯಾಗಿದ್ದನು.
ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ಆರೋಪಿಯಿಂದ 4.65 ಲಕ್ಷ ಮೌಲ್ಯದ ವಸ್ತು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇನ್ನು ಜಿಲ್ಲೆಯ 3 ಠಾಣೆಗಳ 7 ಕಳ್ಳತನ ಪ್ರಕರಣ ಬೇಧಿಸಿದ್ದು ಒಟ್ಟು 7 ಜನ ಆರೋಪಿಗಳನ್ನ ಬಂಧಿಸಿ, ಬಂಧಿತರಿಂದ 18 ಲಕ್ಷ 84 ಸಾವಿರ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ. ಪ್ರಕರಣ ಬೇಧಿಸಿದ ಪೊಲೀಸರ ಕಾರ್ಯಕ್ಕೆ ಎಸ್ಪಿ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.