ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ಮಾರುತಿ ಲೇಔಟ್ ನಲ್ಲಿ ವಾಸವಾಗಿದ್ದ ತೌಫಿಲ್ ನ ಹೆಡೆಮುರಿ ಕಟ್ಟಲಾಗಿದೆ. ಸುಮಾರು ಐದಾರು ತಿಂಗಳಿಂದ ಆರೋಪಿ ನಂಜುಂಡಪ್ಪ ಎಂಬುವವರ ಮನೆಯಲ್ಲಿ ವಾಸವಿದ್ದು, ಯಾರ ಜೊತೆಗೆ ಸರಿಯಾಗಿ ಸಂಪರ್ಕದಲ್ಲಿರಲಿಲ್ಲ.
ಮಡಿಕೇರಿ ಮೂಲದವನಾದ ಆರೋಪಿ ಇಲ್ಲಿ ವಾಸವಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ಮೊದಲಿಗೆ ಪ್ಲಂಬರ್ ಕೆಲಸದವರ ರೀತಿ ಮನೆಗೆ ಎಂಟ್ರಿ ಕೊಟ್ಟಿದ್ದರು. ಈ ವೇಳೆ ತೌಫಿಲ್ ಮಟನ್ ಕಟ್ ಮಾಡುತ್ತಿದ್ದ ಎನ್ನಲಾಗಿದ್ದು, ಅಧಿಕಾರಿಗಳ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಿದ್ದಾನೆ. ಈ ವೇಳೆ 10 ಜನರ ತಂಡವಾಗಿ ಬಂದಿದ್ದ ಅಧಿಕಾರಿಗಳ ತಂಡ ಈತನನ್ನು ಲಾಕ್ ಮಾಡಿದೆ. ಈ ಹಿಂದೆ ಈತನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.
ಇದನ್ನೂ ಓದಿ : Chamarajanagar : 14 ವರ್ಷದ ಬಾಲಕಿ ಜೊತೆ ಬಲವಂತದ ಮದುವೆ: ತಾಯಿ-ಮಗನಿಗೆ 20 ವರ್ಷ ಶಿಕ್ಷೆ
ಪ್ರಕರಣದ ಹಿನ್ನೆಲೆ
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್ ಬಳಿ ಕೋಳಿ ಮಾಂಸದಂಗಡಿ ಹೊಂದಿರುವ ಪ್ರವೀಣ್ ನೆಟ್ಟಾರು 2022ರ ಜುಲೈ 26ರ ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಈವರೆಗೆ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಬಲೆ ಬೀಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.ಆರೋಪಿಗಳಿಗೆ ಪಿಎಫ್‌ಐ ಜತೆ ನಂಟು ಇರುವ ಕುರಿತು ಮಾಹಿತಿ ಲಭಿಸಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಈ ಹಿಂದೆ ಹೇಳಿದ್ದರು. ಭಯೋತ್ಪಾದನೆ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ ಮಾಡಲಾಗಿದೆ ಎಂದು ಎನ್ಐಎ ಸಹ ಹೇಳಿದೆ. ಸದ್ಯ ಆರೋಪಿ ತೌಫಿಕ್ ಬಂಧನವಾಗಿದ್ದು, ಮತ್ತಷ್ಟು ಆರೋಪಿಗಳಿಗಾಗಿ ಎನ್ಐಎ ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.
ಇದನ್ನೂ ಓದಿ : Hassan : ಮುಖಕ್ಕೆ ಮಾರಕವಾದ ಮೇಕಪ್ : ಮುಂದೂಡಿದ ಮದುವೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.