ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26 ರಾತ್ರಿ ನಡೆದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಇದೀಗ ಸೂಕ್ತ ಕ್ರಮ ಕೈಗೊಂಡಿದ್ದು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಯುನಿಕಾರ್ನ್ ಕಂಪನಿಗಳಲ್ಲಿ ಭಾರತೀಯರೇ ಮೇಲುಗೈ: ಯುಎಸ್‌ ಸಮೀಕ್ಷೆಯಿಂದ ಬಯಲು


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಈ ಮಧ್ಯೆ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. 


ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ  ಯುವಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 


"ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ನಡೆಸಲಾಗಿದೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧಎ ಎಂ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಇದರ ಸಂಪೂರ್ಣ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ. ಜೊತೆಗೆ ಮಾಹಿತಿ ಪಡೆದ ಮೇಲೆ ಎನ್​​ಐಎಗೆ ಪತ್ರ ಬರೆಯುಲು ತಿಳಿಸಿದ್ದೇನೆ" ಎಂದು ಸಿಎಂ ಬೊಮ್ಮಾಯಿ ಹೇಳಿದರು.


ಇದನ್ನೂ ಓದಿ: Shravan 2022: ಹಣಕಾಸಿಗೆ ಸಂಬಂಧಿಸಿದ ಸಮಸ್ಯೆ ನಿವಾರಣೆಗೆ ಇಂದೇ ಈ ಉಪಾಯ ಮಾಡಿ


ದಕ್ಷಿಣ ಕನ್ನಡದಲ್ಲಿ ಸದ್ಯ ಪರಿಸ್ಥಿತಿ ಬಿಗಡಾಯಿಸಿದ್ದು, ಕೆಎಸ್ಆರ್​​ಪಿಯ ಇನ್ನೊಂದು ಬೆಟಾಲಿಯನ್​ ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲದೆ, ಕೇರಳ ಗಡಿಯಲ್ಲಿ​ ಸಿಸಿಟಿವಿ ಕಣ್ಗಾವಲು ವಹಿಸಲಾಗುವುದು. ಎರಡು ರಾಜ್ಯಗಳ ಸಂಪರ್ಕ ಇರುವ ಕಡೆ ಚೆಕ್​ ಪೋಸ್ಟ್‌ಗಳನ್ನು ನಿಯೋಜಿಸಬೇಕು. ಸೂಕ್ಷ್ಮ ಊರುಗಳಲ್ಲಿ ಪೊಲೀಸರು ತಾತ್ಕಾಲಿಕ ಕ್ಯಾಂಪ್ ಮಾಡಬೇಕು ಎಂದು ಸೂಚನೆಯನ್ನು ನೀಡಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.