ಪಾಕಿಸ್ತಾನದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

Pregnant woman gang raped: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

Written by - Chetana Devarmani | Last Updated : Jun 6, 2022, 05:36 PM IST
  • ಪಾಕಿಸ್ತಾನದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ
  • ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
  • ಪತಿಯನ್ನು ಹಗ್ಗದಿಂದ ಕಟ್ಟಿಹಾಕಿ ಕೃತ್ಯ
ಪಾಕಿಸ್ತಾನದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ title=
ಅತ್ಯಾಚಾರ

ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಜರುಗಿದೆ. ಪಂಜಾಬ್ ಪ್ರಾಂತ್ಯದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ: ಪ್ರವಾದಿ ಕುರಿತ ವಿವಾದಾತ್ಮಕ ಪೋಸ್ಟ್‌: ಮುಸ್ಲಿಂ ರಾಷ್ಟ್ರಗಳಿಂದ ತೀವ್ರ ಖಂಡನೆ

ಝೇಲಂ ನಗರದಲ್ಲಿ ಮಗುವಿನ ನಿರೀಕ್ಷೆಯಲ್ಲಿದ್ದ ಮಹಿಳೆಯೊಬ್ಬರ ಮನೆಗೆ ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ನುಗ್ಗಿದ್ದಾರೆ ಎಂದು ಡೈಲಿ ಪಾಕಿಸ್ತಾನ ವರದಿ ಮಾಡಿದೆ. ವರದಿಯ ಪ್ರಕಾರ, ದುಷ್ಕರ್ಮಿಗಳ ಗುಂಪು ಮೊದಲು ಹಲ್ಲೆ ನಡೆಸಿ ನಂತರ ಸಂತ್ರಸ್ತೆಯ ಪತಿಯನ್ನು ಹಗ್ಗದಿಂದ ಕಟ್ಟಿಹಾಕಿದೆ. ಬಳಿಕ ಗರ್ಭಿಣಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಘಟನರ ಬಳಿಕ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ಗರ್ಭಿಣಿಯ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ಸಂತ್ರಸ್ತೆಯ ರಕ್ತದ ಮಾದರಿಯನ್ನು ಲಾಹೋರ್‌ಗೆ ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಿಂಗಳು ಚಲಿಸುವ ರೈಲಿನಲ್ಲಿ ಕರಾಚಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಕೆಲವೇ ದಿನಗಳಲ್ಲಿ ಈ ಅಪರಾಧ ಸಂಭವಿಸಿದೆ. ಇಬ್ಬರು ಮಕ್ಕಳ ತಾಯಿಯಾಗಿರುವ ಮಹಿಳೆಯ ಮೇಲೆ ಟಿಕೆಟ್ ಚೆಕ್ಕರ್ ಸೇರಿದಂತೆ ಮೂವರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ ವಾರ ಆಕೆ ಕರಾಚಿಯಿಂದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಲ್ತಾನ್‌ಗೆ ಪ್ರಯಾಣಿಸುತ್ತಿದ್ದಳು ಎಂದು ಪಾಕಿಸ್ತಾನದ ರೈಲ್ವೆ ಸಚಿವಾಲಯವನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ. ಪೊಲೀಸ್ ವರದಿಯನ್ನು ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ, ಅತ್ಯಾಚಾರದ ಶಂಕೆಯ ಮೇಲೆ ಮೂವರನ್ನು ಬಂಧಿಸಲಾಗಿದೆ.

ಫೆಬ್ರವರಿಯಲ್ಲಿ ಪಂಜಾಬ್ ಮಾಹಿತಿ ಆಯೋಗವು ಒದಗಿಸಿದ ದತ್ತಾಂಶವು ಪ್ರಾಂತ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಒಟ್ಟು 2,439 ಮಹಿಳೆಯರ ಮೇಲೆ ಅತ್ಯಾಚಾರ ನಡೆದಿದ್ದು, 90 ಮಂದಿಯನ್ನು ಕೊಲ್ಲಲಾಗಿದೆ ಎಂದು ತೋರಿಸುತ್ತದೆ.

ಕಳೆದ ವರ್ಷದ 'ಗ್ಲೋಬಲ್ ಜೆಂಡರ್ ಗ್ಯಾಪ್ ರಿಪೋರ್ಟ್ 2021' ಪ್ರಕಾರ, ಪಾಕಿಸ್ತಾನವು ಲಿಂಗ ಸಮಾನತೆ ಸೂಚ್ಯಂಕದಲ್ಲಿ 156 ದೇಶಗಳಲ್ಲಿ 153 ನೇ ಸ್ಥಾನದಲ್ಲಿದೆ, ಅಂದರೆ ಕೊನೆಯ ನಾಲ್ಕರಲ್ಲಿ ಸ್ಥಾನ ಪಡೆದಿದೆ. 

ಇದನ್ನೂ ಓದಿ: ಜಾಮೀಯಾ ಮಸೀದಿ ವಿವಾದದ ನಡುವೆ ಮತ್ತೊಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಗೋ ಮಧುಸೂದನ್

ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗದ (HRCP) ಇತ್ತೀಚಿನ ವರದಿಯು ಪಾಕಿಸ್ತಾನದಲ್ಲಿ ಪ್ರತಿದಿನ ಕನಿಷ್ಠ 11 ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಕಳೆದ ಆರು ವರ್ಷಗಳಲ್ಲಿ (2015-21) ಪೊಲೀಸರಿಗೆ 22,000 ಕ್ಕೂ ಹೆಚ್ಚು ಘಟನೆಗಳು ವರದಿಯಾಗಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News