Bengaluru student harassment case: ಬೆಂಗಳೂರಿನಲ್ಲಿ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಪಿಜಿ ಮಾಲೀಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಪಿಜಿ ಮಾಲೀಕನಿಂದಲೇ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ನಡೆದಿದ್ದು, ಕೇಸ್ ದಾಖಲಾಗಿದೆ. ಪಿಜಿ ಮಾಲೀಕ ಅಶ್ರಫ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿರುವ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು ಪಿಜಿ ಮಾಲೀಕ ಅಶ್ರಫ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಸೋಲದೇವನಹಳ್ಳಿ ಪಿಜಿ ಮಾಲೀಕನಿಂದಲೇ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ವಿದ್ಯಾರ್ಥಿನಿ PG ಗೆ ಸೇರಿ ಕೇವಲ 10 ದಿನ ಕಳೆದಿತ್ತಷ್ಟೇ. ಮೊನ್ನೆ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನ ಹೊತ್ತೊಯ್ದ ಅಶ್ರಫ್, ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದುಬಂದಿದೆ.
ಅಶ್ರಫ್ ನಿಂದ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯಿಂದ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರಿಂದ ಅಶ್ರಫ್ ನನ್ನು ಬಂಧಿಸಿದ್ದು ವಿಚಾರಣೆ ಮುಂದುವರೆಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.