ನವದೆಹಲಿ: 45ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದ ಕಾಮುಕ ಪ್ರನ್ಸಿಪಾಲ್‍ನನ್ನು ಬಂಧಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಮಹಿಳೆಯರನ್ನು ರೇಪ್ ಮಾಡಿದ್ದಲ್ಲದೆ ವಿಡಿಯೋ ಮಾಡಿ ಬ್ಲ್ಯಾಕ್‍ಮೇಲ್ ಮಾಡಿದ ಆರೋಪದ ಮೇರೆಗೆ ಕರಾಚಿಯ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ.  


COMMERCIAL BREAK
SCROLL TO CONTINUE READING

ಆರೋಪಿ ಪಿನ್ಸಿಪಾಲ್‍ರನ್ನು ಇರ್ಫಾನ್ ಗಫೂರ್ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸುಮಾರು 25ಕ್ಕೂ ಹೆಚ್ಚು ವಿಡಿಯೋ ತುಣುಕುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು ಆತನ ಸಿಸಿಟಿಯ ಡಿವಿಆರ್ ಅನ್ನು ಪರಿಶೀಲಿಸುತ್ತಿದ್ದಾರೆ.


ಇದನ್ನೂ ಓದಿ: Google: 25 ವರ್ಷ ಪೂರೈಸಿದ ಗ್ಲೋಬಲ್‌ ಸರ್ಚ್‌ ಇಂಜಿನ್


ಇರ್ಫಾನ್ ಮತ್ತು ಶಾಲೆಯ ಶಿಕ್ಷಕಿಯ ವಿಡಿಯೋ ವೈರಲ್ ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಖಾಸಗಿ ಶಾಲೆಗೆ ಆಗಮಿಸಿದ ಪೊಲೀಸರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಬಳಿಕ ಶಾಲೆಯನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.


ಲೈಂಗಿಕ ಕಿರುಕುಳ, ಬೆದರಿಕೆ ಮತ್ತು ಬ್ಲ್ಯಾಕ್‍ಮೇಲೆ ನಡೆಸಿದ ಆಧಾರದ ಮೇಲೆ ಆರೋಪಿ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕರಾಚಿ ಪೊಲೀಸರು ಉನ್ನತಮಟ್ಟದ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಶ್ರೀಲಂಕಾ ಬಂದರಿನಲ್ಲಿ ಚೀನಾದ ಬೇಹುಗಾರಿಕಾ ಹಡಗು, ಭಾರತಕ್ಕೆ ಆತಂಕ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.