ದಾವಣಗೆರೆ : ಖಾಸಗಿ ಬಸ್ ಪಲ್ಟಿಯಾಗಿ 20 ಜನರಿಗೆ ಗಾಯಗೊಂಡಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟೀಯ ಹೆದ್ದಾರಿ 50ರಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಧ್ಯ ಗಾಯಾಳುಗಳು ಜಗಳೂರು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. 


ಇದನ್ನೂ ಓದಿ : ರಾಜ್ಯದಲ್ಲಿ ಕೋವಿಡ್ ಹೆಚ್ಚಳ, ಮಂಕಿಪಾಕ್ಸ್ ಭೀತಿ- ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಆರೋಗ್ಯ ಸಚಿವರು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.