ಮನೆಯಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ 8ನೇ ವಾರ್ಡಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆಯನ್ನು  ಪೊಲೀಸರು ಬಂಧಿಸಿದ್ದಾರೆ. 8ನೇ ವಾರ್ಡಿನ ನಿವಾಸಿ ಭಾರತಿ ಮಹಿಳೆ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. 


ಇದನ್ನೂ ಓದಿ- Job Alert: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ


ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆಂಧ್ರ ಮೂಲದ ಮಹಿಳೆಯನ್ನು ರಕ್ಷಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಸಾಂತ್ವನ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ- ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!


ಕಾರ್ಯಾಚರಣೆ ನಡೆಸುವಲ್ಲಿ ಬಾಗೇಪಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತ ಆರೋಪಿ ಆಂಧ್ರ ಪ್ರದೇಶದಿಂದ ಮಹಿಳೆಯರನ್ನು ಕರೆಸಿಕೊಂಡು ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.