ಪಿಎಸ್ಐ ನೇಮಕಾತಿ ಹಗರಣ: ಕಿಂಗ್‌ಪಿನ್‌ ಮಂಜುನಾಥ್‌ ಶರಣು

ಇಂದು ಸಿಐಡಿ ಕಚೇರಿಗೆ ಆಟೋದಲ್ಲಿ ಆಗಮಿಸಿದ ಮಂಜುನಾಥ್ "ನನಗೆ ನನಗೆ ಆರೋಗ್ಯ ಸರಿಯಿರಲಿಲ್ಲ. ಹಾಗಾಗಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಇದೀಗ ಆಗಮಿಸಿ ಶರಣಾಗಿದ್ದೇನೆ" ಎಂದಿದ್ದಾರೆ. 

Written by - Bhavishya Shetty | Last Updated : May 1, 2022, 03:50 PM IST
  • ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ
  • ಕಿಂಗ್‌ಪಿನ್‌ ಮಂಜುನಾಥ್ ಮೇಳಕುಂದಿ ಶರಣು
  • ಆಟೋದಲ್ಲಿ ಸಿಐಡಿ ಕಚೇರಿಗೆ ಆಗಮಿಸಿದ ಆರೋಪಿ
ಪಿಎಸ್ಐ ನೇಮಕಾತಿ ಹಗರಣ: ಕಿಂಗ್‌ಪಿನ್‌ ಮಂಜುನಾಥ್‌ ಶರಣು title=
Manjunath Melagundi

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದ ಕಿಂಗ್‌ಪಿನ್‌ ಮಂಜುನಾಥ್ ಮೇಳಕುಂದಿ ಇಂದು ಸಿಐಡಿ ಗೆ ಶರಣಾಗಿದ್ದಾರೆ. ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿದ್ದ ಮಂಜುನಾಥ್‌ ಹುಡುಕಾಟಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ಅವರೇ ಬಂದು ಶರಣಾಗಿದ್ದಾರೆ. 

ಇದನ್ನು ಓದಿ: PSI ನೇಮಕಾತಿ ಅಕ್ರಮ: ತಡರಾತ್ರಿವರಗೆ ನಿದ್ರೆ ಬರದೆ ಪರದಾಡಿದ ದಿವ್ಯಾ ಹಾಗರಗಿ

ನೀರಾವರಿ ಇಲಾಖೆಯಲ್ಲಿ ಹಾಯಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುನಾಥ್ ಮೇಳಕುಂದಿ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಇಂದು ಸಿಐಡಿ ಕಚೇರಿಗೆ ಆಟೋದಲ್ಲಿ ಆಗಮಿಸಿದ ಮಂಜುನಾಥ್ "ನನಗೆ ನನಗೆ ಆರೋಗ್ಯ ಸರಿಯಿರಲಿಲ್ಲ. ಹಾಗಾಗಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಇದೀಗ ಆಗಮಿಸಿ ಶರಣಾಗಿದ್ದೇನೆ" ಎಂದಿದ್ದಾರೆ. 

ಈ ಹಿಂದೆ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಏಪ್ರಿಲ್‌ 29ರಂದು ಪುಣೆಯಲ್ಲಿ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿತ್ತು. ಪರೀಕ್ಷಾಅಕ್ರಮಕ್ಕೆ ಸಾಥ್ ನೀಡಿರುವ ಆರೋಪದ ಮೇರೆಗೆ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಜ್ಞಾನಜ್ಯೋತಿ ಶಾಲೆಯ ಒಡತಿ ಹಾಗೂ ಬಿಜೆಪಿ ನಾಯಕಿ ದಿವ್ಯಾಳನ್ನು ಮಹಾರಾಷ್ಟ್ರದ ಪುಣೆ ಬಳಿ ಸಿಐಡಿ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನು ಓದಿ: ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ: ಕೇಂದ್ರ ಸಚಿವ ಅಮಿತ್ ಶಾ ಆಗಮನ

ಇನ್ನು ಸಣ್ಣ ಸುಳಿವು ಸಿಗದಂತೆ ತಲೆಮರೆಸಿಕೊಂಡಿದ್ದ ಮಂಜುನಾಥ್‌ ಇದೀಗ ಶರಣಾಗಿರುವುದು ಆಶ್ಚರ್ಯ ಮೂಡಿಸಿದೆ. 

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News