ದಕ್ಷಿಣ ಕನ್ನಡ:  ಜಿಲ್ಲೆಯ ಪುತ್ತೂರು ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾಳೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು ಸಿಎಂ ಸೂಚನೆ 


ಕೊಲೆಯಾದ ಯುವತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಭಾಗದ ಅಳಿಕೆ ನಿವಾಸಿ ಗೌರಿ(18) ಎಂದು ಗುರುತಿಸಲಾಗಿದೆ.ಆರೋಪಿ ಪದ್ಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ.ಯುವಕನು ಗುರುವಾರ ಮಧ್ಯಾಹ್ನ ನಗರದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆಗೈಯಲು ಯತ್ನ ನಡೆಸಿದ್ದಾನೆ.ಗಾಯಗೊಂಡು ಯುವತಿ ಬಿದ್ದ ಬಳಿಕ ಪರಾರಿಯಾಗಿದ್ದ ಎನ್ನಲಾಗಿದೆ.


ಇದನ್ನೂ ಓದಿ: ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವಿಗೆ ಒಂದು ವಾರದ ಗಡುವು ನೀಡಿದ ಬೆಸ್ಕಾಂ


'ಅಳಿಕೆ ನಿವಾಸಿ 18 ವರ್ಷದ ಗೌರಿ ಎಂಬ ಯುವತಿಗೆ ಪದ್ಮರಾಜ್ ಎಂಬ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಪುತ್ತೂರು ಪೇಟೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆʼ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಸಿ.ಬಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.