ಬೆಂಗಳೂರು: ಹಿಜಾಬ್ ಗೊಂದಲದ ನಡುವೆ ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರದವರೆಗೆ ಹಿಜಾಬ್ ಧರಿಸಿ ಬಂದಿದ್ದವರು, ಭವಿಷ್ಯವೇ ಮುಖ್ಯ ಅಂತ ಹಿಜಾಬ್‌ನ್ನು ಬದಿಗಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಮೂವರು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇದನ್ನು ಓದಿ: PSI Scam: ಪಿಎಸ್ಐ ಹುದ್ದೆಗಳ ಅಕ್ರಮ ನೇಮಕಾತಿಯ ಸ್ಫೋಟಕ ಆಡಿಯೋ ಪತ್ತೆ!
ಸಮವಸ್ತ್ರ ಕಿಡಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಶುರುವಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಗೆ ಪರೀಕ್ಷೆ ನಿರ್ವಹಣೆಯೇ ದೊಡ್ಡ ಟೆನ್ಶನ್ ಆಗಿತ್ತು. ಹೀಗಾಗಿ ಪರೀಕ್ಷಾ ಕೇಂದ್ರದ ಬಳಿ ಖಾಕಿ ಕಟ್ಟೆಚ್ಚರ ವಹಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷಾ ಕೇಂದ್ರದ ಬಳಿ ಪೊಲೀಸ್ ಸರ್ಪಗಾವಲು ಜೊತೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಇನ್ನು ಹಿಜಾಬ್ ಹಕ್ಕಿಗಾಗಿ ಕೋರ್ಟ್ ಮೆಟ್ಟಿಲೇರಿದ್ದ ಅಲ್ಮಾಸ್, ಹಜ್ರಾ ಮತ್ತು ಆಯೆಷಾ ಎಂಬ ಮೂವರು ವಿದ್ಯಾರ್ಥಿಗಳು ಹಾಲ್ ಟಿಕೆಟ್ ಪಡೆದಿದ್ದರೂ ಸಹ ಪರೀಕ್ಷೆಗೆ ಗೈರಾಗಿದ್ದಾರೆ.
ಇನ್ನೊಂದೆಡೆ ಹಿಜಾಬ್ ಪರ ಕಾನೂನು ಹೋರಾಟಗಾರ್ತಿ ಆಲಿಯಾ ಅಸಾದಿ ಟ್ವೀಟ್ ಮೂಲಕ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧ ಬೆದರಿಕೆ ಆರೋಪ ಮಾಡಿದ್ದಾರೆ.
ಇದನ್ನು ಓದಿ: ಬಮೂಲ್ ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ: ತನಿಖೆಗೆ ಸರ್ಕಾರದ ಆದೇಶ
"ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನನಗೆ ಹಾಗೂ ರೇಶಮ್‌ಗೆ ಅನುಮತಿ ನಿರಾಕರಿಸಲಾಗಿದೆ. ಪದೇ ಪದೆ ನಮ್ಮನ್ನು ನಿರಾಶೆಗೊಳಿಸಲಾಗುತ್ತಿದೆ. ನಾವು ಪರೀಕ್ಷೆಗೆ ಹಾಜರಾದರೆ ನಮ್ಮ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವ ಬೆದರಿಕೆಯನ್ನು ಶಾಸಕ ರಘುಪತಿ ಭಟ್ ಹಾಕಿದ್ದಾರೆ. ನಾವು ಮಾಡಿರುವ ಅಪರಾಧವಾದರೂ ಏನು? ದೇಶ ಎತ್ತ ಸಾಗುತ್ತಿದೆ" ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.