Bengalore Crime : ಡ್ರಾಪ್ ಕೊಡುವ ನೆಪದಲ್ಲಿ ಬಸ್ ನಲ್ಲೇ ಆತ್ಯಾಚಾರ : ಸ್ಕೂಲ್ ಬಸ್ ಚಾಲಕ ಅರೆಸ್ಟ್
Bengalore Crime : ಡ್ರಾಪ್ ಕೊಡುವ ಸೋಗಿನಲ್ಲಿ ಮಹಿಳೆಯನ್ನ ಬಸ್ ಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಡ್ರಾಪ್ ಕೊಡುವ ಸೋಗಿನಲ್ಲಿ ಮಹಿಳೆಯನ್ನ ಬಸ್ ಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್ ಬಂಧಿತ ಆರೋಪಿ. ಖಾಸಗಿ ಶಾಲೆಯೊಂದರ ಸ್ಕೂಲ್ ಬಸ್ ಚಾಲಕನಾಗಿ ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದ. ನಿನ್ನೆ ಸಂಜೆ ಎಂದಿನಂತೆ ಶಾಲಾ ಮಕ್ಕಳನ್ನು ಡ್ರಾಪ್ ಮಾಡಿ ನಾಯಂಡಹಳ್ಳಿ ಬಳಿ ಹೋಗುತ್ತಿರುವಾಗ ಡ್ರಾಪ್ ಕೊಡುವ ಸೋಗಿನಲ್ಲಿ ಮಹಿಳೆಯನ್ನು ಬಸ್ ಗೆ ಹತ್ತಿಸಿಕೊಂಡಿದ್ದಾನೆ. ಕೆಲ ದೂರ ಹೋಗಿ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿ ಬಸ್ ನಲ್ಲೇ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಳಿಕ ಮಹಿಳೆಯನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಮಧ್ಯೆ ಮಹಿಳೆಯು ಬಸ್ ಪೋಟೋ ಕ್ಲಿಕ್ ಮಾಡಿ ಮಗನಿಗೆ ಪೋನ್ ಮಾಡಿ ತಿಳಿಸಿದ್ದಾಳೆ. ಮಹಿಳೆ ನೀಡಿದ ಮಾಹಿತಿ ಆಧರಿಸಿ ಬಸ್ ಚಾಲಕನನ್ನ ಪತ್ತೆ ಮಾಡಿದ ಮಗ ಚಾಲಕನನ್ನ ಥಳಿಸಿದ್ದಾನೆ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸರಿಗೆ ನಡೆದ ವಿಷಯ ತಿಳಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಇದನ್ನೂ ಓದಿ : Crime News: ಪ್ರೇಮಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.