Crime News : ಪ್ರಿಯಕರನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ರಕ್ತಸ್ರಾವದಿಂದ ಬಾಲಕಿ ಸಾವು

Bangalore Crime News : ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಪ್ರಕರಣ ದಾಖಲಾಗಿದೆ.

Written by - VISHWANATH HARIHARA | Edited by - Chetana Devarmani | Last Updated : Mar 25, 2023, 01:38 PM IST
  • ಪ್ರಿಯಕರನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ
  • ರಕ್ತಸ್ರಾವದಿಂದ ಬಾಲಕಿ ಸಾವು
  • ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಘಟನೆ
Crime News : ಪ್ರಿಯಕರನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ, ರಕ್ತಸ್ರಾವದಿಂದ ಬಾಲಕಿ ಸಾವು title=
Crime News

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಆರೋಪದಡಿ ಕಗ್ಗಲೀಪುರ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿನ್ನೆ ಘಟನೆ‌ ನಡೆದಿದ್ದು,
17 ವರ್ಷದ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದೆ. ಈ ವೇಳೆ ತೀವ್ರ ರಕ್ತಸ್ರಾವದಿಂದ ಅಪ್ರಾಪ್ತೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ : ಹೈ ವೋಲ್ಟೇಜ್ ಕ್ಷೇತ್ರ ಸವಣೂರು, ಶಿಗ್ಗಾಂವಿ ಬಿಟ್ಟು 5 ಕ್ಷೇತ್ರದ 'ಕೈ' ಟಿಕೆಟ್ ಪೈನಲ್!

ಅದೇ ಗ್ರಾಮದ ಯುವಕನಿಂದ ಈ ನೀಚ ಕೃತ್ಯವೆಸಗಿದ್ದು ಸ್ಥಳಕ್ಕೆ ಕಗ್ಗಲೀಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಪ್ರಕರಣ ದಾಖಲಾಗಿದೆ. ಇನ್ನೂ ಮೃತ ಅಪ್ರಾಪ್ತೆ ಹಾಗೂ ಆರೋಪಿ  ಒಂದೇ ಕಾಲೇಜಿನಲ್ಲಿ ಓದುತ್ತಿದ್ದು, ಪ್ರೀತಿ ಪ್ರೇಮ ಅಂತಾ ಸುತ್ತಾಡುತ್ತಿದ್ದರೆಂದು ಹೇಳಲಾಗಿದೆ.

ಇದೇ ಸಲುಗೆಯಿಂದ ಯುವಕ ನಿನ್ನೆ ಯುವತಿಯನ್ನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಲೈಂಗಿಕ ಕ್ರಿಯೆ ವೇಳೆ ಯುವತಿ ರಕ್ತಸ್ರಾವದಿಂದ ಮೃತಪಟ್ಟ ಹಿನ್ನೆಲೆ ಯುವಕ ಸಹಾಯಕ್ಕಾಗಿ ತನ್ನ ಸ್ನೇಹಿತರನ್ನು ಕರೆಸಿಕೊಂಡಿದ್ದಾನೆ. ಸದ್ಯ ಆರೋಪಿಗಳು ಸಹ ಕಾನೂನು ಸಂಘರ್ಷಕ್ಕೊಳಗಾದವರಾಗಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ, ಆತಂಕದಲ್ಲಿ ಆರೋಗ್ಯ ಇಲಾಖೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News