ಹುಬ್ಬಳ್ಳಿ: ಕರ್ನಾಟಕದ ಮಾಜಿ ಸಚಿವರೊಬ್ಬರಿಗೆ ಸೇರಿದೆ ಎನ್ನಲಾದ ರಾಷ್ಟ್ರೀಯ ಸಾರಿಗೆ ಬಸ್‌ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ದುರಂತ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ಈಗ ನಿಮ್ಮೊಂದಿಗೆ RC-DL ಒಯ್ಯುವ ಅಗತ್ಯವಿಲ್ಲ- ಎಲ್ಲವನ್ನು ವಾಟ್ಸಾಪ್‌ನಲ್ಲೇ ಡೌನ್‌ಲೋಡ್ ಮಾಡಿ


ಧಾರವಾಡ ರಸ್ತೆ ಅಪಘಾತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದವರು ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಂದಿಗೆ ಗಾಯಗಳಾಗಿದ್ದು ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 


ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದ ಬಸ್‌ ಚಾಲಕ, ರಸ್ತೆಯ ಬಲಭಾಗಕ್ಕೆ ಸರಿಯಾದ ದಿಕ್ಕಿನಲ್ಲಿ ಬರ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಈ ದುರಂತ ಸಂಭವಿಸಿದೆ. ಇನ್ನು ಅವಘಡಕ್ಕೆ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟ ಅನೇಕರು ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಹಾಪುರ ಮತ್ತು ಪುಣೆ ಮೂಲದವರು ಎಂದು ತಿಳಿದುಬಂದಿದೆ. 


ಅಪಘಾತಕ್ಕೀಡಾದ ಬಸ್‌ ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿತ್ತು. ನ್ಯಾಷನಲ್ ಟ್ರಾವೆಲ್ಸ್‌ KA 51 AA 7146 ನಂಬರಿನ ಬಸ್ ಹಾಗೂ MH 16 AY 6916 ನಂಬರಿನ ಲಾರಿ ಮಧ್ಯೆ ಈ ಅಪಘಾತ ಸಂಭವಿಸಿದೆ. ಸದ್ಯ ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಇದನ್ನು ಓದಿ: Shani Vakri: ಮುಂದಿನ ತಿಂಗಳಿನಿಂದ ಈ ರಾಶಿಯವರಿಗೆ ಕೆಟ್ಟ ದಿನಗಳು ಪ್ರಾರಂಭ


ಅಪಘಾತದಲ್ಲಿ ಮೃತಪಟ್ಟವರನ್ನು  ಇಚಲಕರಂಜಿಯ ಬಾಬಾಸೋ ಅಣ್ಣಾಸೋ ಚೌಗಲೆ , ನ್ಯಾಷನಲ್ ಟ್ರಾವಲ್ಸ್ ಚಾಲಕರಾದ ಅತಾವುಲ್ಲಾ ಹಾಗೂ ನಾಗರಾಜ, ಮೈಸೂರು ಮೂಲದ ಮೊಹಮ್ಮದ್ ಅಯಾನ್ ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಇನ್ನು ಪತ್ತೆಯಾಗಿಲ್ಲ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.