ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ದುರ್ಮರಣ

 ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು.

Written by - Bhavishya Shetty | Last Updated : Apr 20, 2022, 06:13 PM IST
  • ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ
  • ಸ್ಥಳದಲ್ಲೇ 6 ಮಂದಿ ಸಾವು
  • ಹುಣಸೂರು ತಾಲೂಕಿನ ಕಲ್​ಬೆಟ್ಟ ರಸ್ತೆಯಲ್ಲಿ ಘಟನೆ
ಹುಣಸೂರಿನಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 6 ಮಂದಿ ದುರ್ಮರಣ title=
Hunsur

ಮೈಸೂರು: ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಲ್​ಬೆಟ್ಟ ರಸ್ತೆಯಲ್ಲಿ ನಡೆದಿದೆ. 

ಇದನ್ನು ಓದಿ: ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ: 5 ವರ್ಷದ ಮಗನನ್ನು ಕೊಂದು ನೇಣಿಗೆ ಶರಣಾದ ತಾಯಿ

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಹುಣಸೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಲಿಬೆಟ್ಟ ಮೂಲದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ್, ಬಾಬು ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. 

ಇದನ್ನು ಓದಿ: "ಕೊರೊನಾ 4 ನೇ ಅಲೆ ಬಂದಿಲ್ಲ.. ಪ್ರಕರಣ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ"

ಮದುವೆ ಸಮಾರಂಭ ಮುಗಿಸಿಕೊಂಡು ಹುಣಸೂರಿನಿಂದ ಊರಿನತ್ತ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತರೆಲ್ಲರೂ ಕೊಡಗು ಜಿಲ್ಲೆಯವರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ದೌಡಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News