ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ ಮೂವರು ಸಾವು, ಮರದಲ್ಲಿ ನೇತಾಡಿದ ಚಾಲಕ

Road Accident: ಇಂದು ಮುಂಜಾನೆ ನಡೆದಿದೆ ಎನ್ನಲಾದ ಅಪಘಾತದಲ್ಲಿ ಮೃತಪಟ್ಟವರು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂಬುವವರು ಎಂದು ತಿಳಿದು ಬಂದಿದೆ.

Written by - Yashaswini V | Last Updated : Jun 7, 2024, 10:06 AM IST
  • ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಕಾರು
  • ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿಯ‌ ತಿರುವಿನಲ್ಲಿ ನಡೆದಿರುವ ಘಟನೆ
  • ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ ಮೂವರು ಸಾವು, ಮರದಲ್ಲಿ ನೇತಾಡಿದ ಚಾಲಕ title=

Road Accident: ಬೆಳಂಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿಯ‌ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಇಂದು ಮುಂಜಾನೆ ನಡೆದಿದೆ ಎನ್ನಲಾದ ಅಪಘಾತದಲ್ಲಿ (Accident) ಮೃತಪಟ್ಟವರು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂಬುವವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ- ಚುನಾವಣೆ ಫಲಿತಾಂಶದ ಬೆನ್ನಲ್ಲೇ ಹಾಸನದಲ್ಲಿ ಹರಿಯಿತು ನೆತ್ತರು : ಬೆಳ್ಳಂಬೆಳಗ್ಗೆ ನಡೆಯಿತು ಭೀಕರ ಮರ್ಡರ್

ಕಳೆದ ರಾತ್ರಿ ಗೌರಿಬಿದನೂರು ತಾಲ್ಲೂಕು ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್  ಬ್ರಿಸ್ಝಾ ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಸ್ಥಳದಲ್ಲಿಯೇ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಸ್ಥಳದಲ್ಲಿಯೇ ಮೃತರಾಗಿದ್ದು, ಶಿವಕುಮಾರ್ ಎಂಬುವರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ (Treatment) ಪಡೆದುಕೊಳ್ಳುತ್ತಿದ್ದಾರೆ.

ಈ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿರುವ (Serious condition) ವ್ಯಕ್ತಿಯನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ನಗರಗೆರೆ ಬಳಿ ತಿರುವು ಇರುವುದರಿಂದ ಮುಂಜಾನೆ ಸಮಯದಲ್ಲಿ ಚಾಲಕನ ನಿದ್ದೆಗೆ ಜಾರಿದ್ದು ನಂತರ ಚಾಲಕನ ನಿಯಂತ್ರಣ ತಪ್ಪಿ ಈ‌ ಘಟನೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ವ್ಯಕ್ತಿಯೋರ್ವನು ತಿರುವು ಕೆಳಗಿನ‌ ಹಳ್ಳದಲ್ಲಿರುವ ಮರದ ಮೇಲೆ ನೇತಾಡುತ್ತಿದ್ದು ಎಲ್ಲರ ಕಣ್ಣಲ್ಲಿ ನೀರು ಬರುವಂತೆ ಮಾಡಿದೆ.

ಇದನ್ನೂ ಓದಿ- IAS ಅಧಿಕಾರಿ ಪುತ್ರಿ ಸೂಸೈಡ್; ಡೆತ್‌ ನೋಟ್‌ನಲ್ಲಿ ಏನಿದೆ ಗೊತ್ತಾ..?

ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News