ATM ದರೋಡೆಗೆ ಗ್ಯಾಸ್ ಕಟರ್ ಬಳಕೆ: ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಎಟಿಎಂ ಯಂತ್ರವನ್ನು ಒಡೆಯಲು ಯತ್ನಿಸಿದ ದರೋಡೆಕೋರರ ಗುಂಪು, ಗ್ಯಾಸ್ ಕಟರ್ ಬಳಸಿದ ಪರಿಣಾಮ ಅದರ ಬೆಂಕಿ ತಗುಲಿ ದೊಡ್ಡ ಮೊತ್ತದ ನಗದು ಸುಟ್ಟು ಬೂದಿಯಾಗಿದೆ.
ಬೆಂಗಳೂರು ನಗರದ ಹೊರವಲಯದ ನೆಲಮಂಗಲದಲ್ಲಿ ಗುರುವಾರ ಈ ಘಟನೆ ನಡೆದಿದೆ. ATMಗೆ ಕನ್ನ ಹಾಕಲು ಯತ್ನಿಸಿದ್ದ ದರೋಡೆಕೊರರು ಎಟಿಎಂ ತೆರೆಯಲು ಗ್ಯಾಸ್ ಕಟರ್ ಬಳಸಿದ್ದಾರೆ. ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್‍ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬರ ನೆರವು: 'ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾಕೆ ಇಷ್ಟೊಂದು ಅಸಡ್ಡೆ?'-ಸಿಎಂ ಸಿದ್ದರಾಮಯ್ಯ
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮುಂಬೈನಿಂದ ಬ್ಯಾಂಕ್ ಅಧಿಕಾರಿಗಳು ಎಟಿಎಂ ಅಳವಡಿಸಿರುವ ಕಟ್ಟಡದ ಮಾಲೀಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕಟ್ಟಡದ ಮಾಲೀಕರು ಸ್ಥಳಕ್ಕೆ ಧಾವಿಸುತ್ತಿದ್ದಂತೆ ಕಳ್ಳರು ತಮ್ಮ ಸಲಕರಣೆಗಳನ್ನು ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಇಬ್ಬರು ಖರೀಮರು ಈ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಘಟನೆಯಲ್ಲಿ ಎಷ್ಟು ಮೊತ್ತದ ಹಣ ಸುಟ್ಟು ಕರಕಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ನೆಲಮಂಗಲದಲ್ಲಿರುವ ಸ್ವಯಂಚಾಲಿತ ಟೆಲ್ಲರ್ ಮೆಷಿನ್(ATM)ನಲ್ಲಿ ಸಂಗ್ರಹಿಸಲಾಗಿದ್ದ ಹಲವಾರು ಕರೆನ್ಸಿ ನೋಟುಗಳು ಬೂದಿಯಾಗಿವೆ ಎಂದು ಪೊಲೀಸರು ಏಜೆನ್ಸಿಗೆ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಅರ್ಜುನ ಆನೆಯ ʼಕೊಲೆಗಾರʼ ಯಾರು..? : ಸತ್ಯಾಂಶ ಬಿಚ್ಚಿಟ್ಟ ʼಆಡಿಯೋ ವೈರಲ್ʼ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.