ಚಾಮರಾಜನಗರ:  ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೇ ಶ್ರೀಗಂಧದ ಕಳ್ಳರ ಎಂಟ್ರಿಯಾಗಿದ್ದು ಶ್ರೀಗಂಧದ ಮರಗಳನ್ನು ಕತ್ತರಿಸಲು ಮುಂದಾದ ಘಟನೆ ಬೆಳಕಿಗೆ ಬಂದಿದೆ. 


COMMERCIAL BREAK
SCROLL TO CONTINUE READING

ಮಲೆ ಮಹದೇಶ್ವರ ಬೆಟ್ಟಕ್ಕೆ  ತೆರಳುವ ಮಾರ್ಗ ಮಧ್ಯದಲ್ಲಿರುವ ಶ್ರೀಗಂಧದ ಮರಗಳನ್ನು ಕತ್ತರಿಸಿ ಹಾಗೆ  ಬಿಟ್ಟಿದ್ದಾರೆ. ತಾಳು ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ವರೆಗೆ ರಸ್ತೆಯ ಎಡ ಹಾಗೂ ಬಲ ಬದಿಗಳಲ್ಲಿ ನೂರಾರು ಶ್ರೀಗಂಧದ ಮರಗಳು ಬೆಳೆದಿದ್ದು ಮುಖ್ಯರಸ್ತೆಯಲ್ಲಿರುವ  ಐದಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಅರ್ಧಕಡಿದು ಹಾಗೆ ಬಿಡುವ ಮೂಲಕ ಮತ್ತೇ ಕಳ್ಳರು ಕೈ ಚಳಕ ತೋರಲು ಮುಂದಾಗಿದ್ದಾರೆ.


ಇದನ್ನೂ ಓದಿ- ಮಾನಸಿಕ ಕಿರುಕುಳಕ್ಕೆ ಮನನೊಂದು ಮೈಸೂರು ವಿವಿಯ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ


ಹಿಂದೆಯೂ ನಡೆದಿತ್ತು ಕಳ್ಳತನ: 
ಕಳೆದ ಎರಡೂವರೆ ವರ್ಷಗಳ ಹಿಂದೆ  ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ರಸ್ತೆ ಬದಿಯಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಶ್ರೀಗಂಧದ ಮರಗಳನ್ನು ಬುಡ ಸಮೇತ ಕಡಿದಿದ್ದರು‌. ಆಗಲೂ ಅರಣ್ಯ ಇಲಾಖೆ ವಿಶೇಷ ತಂಡ ರಚನೆ ಮಾಡಿ ಕಳ್ಳರನ್ನು ಪತ್ತೆ ಮಾಡುವುದಾಗಿ ಹೇಳಿತ್ತು‌. ಆದರೆ ಕೊನೆಗೂ ಕಳ್ಳರ ಪತ್ತೆಯಾಗಿರಲಿಲ್ಲ. ಇದೀಗ ಮತ್ತೆ ಕಳ್ಳರು ಶ್ರೀಗಂಧದ ಮರಗಳನ್ನು ಕಡಿಯಲು ಪ್ರಾರಂಭಿಸಿದ್ದಾರೆ. 


ಇದನ್ನೂ ಓದಿ- ಧಾರವಾಡ: ಬಸ್ ಚಾಲಕನ ಮೇಲೆ ಏಕಾಏಕಿ ಹಲ್ಲೆ


ಇನ್ನು, ಮಲೆ ಮಹದೇಶ್ವರ ವನ್ಯಜೀವಿಧಾಮದ ಸಿಬ್ಬಂದಿ ಸದಾ ವಾಹನದಲ್ಲಿ ಗಸ್ತು ತಿರುಗಿದರೂ ಮರ ಕಡಿದಿರುವುದು ಕಾಣದಿರುವುದು ವಿಪರ್ಯಾಸವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.