Illegal Liquor Sale In Male Mahadeshwara Betta: ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡದ ಆರೋಪದ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇಬ್ಬರು ಮುಖ್ಯಪೇದೆಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ‌.ಟಿ.ಕವಿತಾ ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ (Madappa Betta) ಪೊಲೀಸ್ ಠಾಣೆಯ ಮುಖ್ಯಪೇದೆ ಅಣ್ಣಾದೊರೆ ಹಾಗೂ ಮುತ್ತುರಾಜು ಅಮಾನತುಗೊಂಡವರು. ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ (Illegal Liquor) ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಗುಪ್ತ ಮಾಹಿತಿ ಸಂಗ್ರಹ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯಪೇದೆ ಅಣ್ಣಾದೊರೆ ರವರನ್ನು ಅಮಾನತ್ತು ಮಾಡಲಾಗಿದೆ. ಇದಲ್ಲದೆ ಸ್ಥಳೀಯರು  ದೂರು ನೀಡಿದ ಹಿನ್ನೆಲೆ ಇನ್ನೋರ್ವ ಮುಖ್ಯಪೇದೆ ಮುತ್ತುರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್‌ಪಿ ಮಾಧ್ಯಮದವರಿಗೆ ತಿಳಿಸಿದ್ದಾರೆ.


ಇದನ್ನೂ ಓದಿ- ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನ


ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ (Male Mahadeshwara Betta Police Station) ಎಎಸ್ಐಯಾಗಿದ್ದ ಚಿಕ್ಕಕಾಳೇಗೌಡ ಅವರನ್ನು ಬೇಗೂರು ಪೊಲೀಸ್ ಠಾಣೆಗೆ, ಪೇದೆಗಳಾದ ಅಮರೇಶ್ ಚಾಮರಾಜನಗರ ಪಟ್ಟಣ ಠಾಣೆ, ಜೆ.ಎಸ್.ಶ್ರೀಗಂಧ ಕೊಳ್ಳೇಗಾಲ ಪಟ್ಟಣ ಠಾಣೆ, ಗುರುಕಿರಣ್ ಜೆ, ಸಿ ಇ.ಎನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.


ಇದನ್ನೂ ಓದಿ- ಗ್ರಾಮ ಲೆಕ್ಕಾಧಿಕಾರಿಗೆ ನಿಂದಿಸಿದ್ದ ವ್ಯಕ್ತಿಗೆ 3 ವರ್ಷ ಜೈಲು


ಹನೂರಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ  ಎಸ್‌ಪಿ ಡಾ.ಬಿ.ಟಿ‌.ಕವಿತಾ ಮಾತನಾಡಿ,  ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ್ದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಧ್ಯ ಮಾರಾಟ ಮಾಡಲು ತಡೆಯಲು  ಸ್ಥಳೀಯ ಪೊಲೀಸ್ ಠಾಣೆಯಿಂದ ನಾಲ್ವರು ಸಿಬ್ಬಂದಿಗಳನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಲಾಗಿದ್ದು ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮದ್ಯ ಮಾರಾಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಿದ್ದೇವೆ ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.