)
Panchkula Suicide Case: ಹರಿಯಾಣದ ಪಂಚಕುಲದ ಸೆಕ್ಟರ್ 27ರ ವಸತಿ ಪ್ರದೇಶವೊಂದರಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಒಂದೇ ಕುಟುಂಬದ ಆರು ಸದಸ್ಯರು ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವಾಗ ರಸ್ತೆ ಮಧ್ಯೆ ಮತ್ತೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಮಂಗಳವಾರ (ಮೇ 27, 2025) ಸಂಭವಿಸಿದೆ. ಮೃತರನ್ನು ಡೆಹ್ರಾಡೂನ್ನ ಮೂಲದವರು ಎನ್ನಲಾಗಿದೆ.
ಉತ್ತರಾಖಂಡದ ಡೆಹ್ರಾಡೂನ್ನವರಾದ ಇವರು ಪಂಚಕುಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಸೋಮವಾರ (ಮೇ 26) ಬಾಗೇಶ್ವರ ಧಾಮದ ಬಾಬಾ ದೀರೇಂದ್ರ ಶಾಸ್ತ್ರಿ ಅವರ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಂಚಕುಲಕ್ಕೆ ಭೇಟಿ ನೀಡಿದ್ದ ಇವರು ಬಳಿಕ ಪಂಚಕುಲದ ಸೆಕ್ಟರ್ 27ರ ಮನೆಯ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಪ್ರವೀಣ್ ಮಿತ್ತಲ್, ಅವರ ತಂದೆ ದೇಶರಾಜ್ ಮಿತ್ತಲ್, ಪತ್ನಿ, ತಾಯಿ, ಇಬ್ಬರು ಹೆಣ್ಣು ಮಕ್ಕಳು ಒಬ್ಬ ಮಗ ಎಂದು ಗುರುತಿಸಲಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಮೃತರೆಲ್ಲರೂ ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದ್ದು, ಸಾಲಭಾದೆ ತಾಳಲಾರದೆ ಕುಟುಂಬದ ಏಳೂ ಸದಸ್ಯರು ಈ ನಿರ್ಧಾರ ಕೈಗೊಂಡಿರಬಹುದು ಎಂದು ಪಂಚಕುಲ ಉಪ ಪೊಲೀಸ್ ಆಯುಕ್ತ ಹಿಮಾದ್ರಿ ಕೌಶಿಕ್ ಶಂಕೆ ವ್ಯಕ್ತಪಡಿಸಿದ್ದಾರೆ.
ಏನಿದು ಘಟನೆ:
ನಿನ್ನೆ ರಾತ್ರಿ ವ್ಯಕ್ತಿಯೊರ್ವ ವಾಕ್ ಮಾಡಲು ಹೋಗಿದ್ದಾಗ ಡೆಹ್ರಾಡೂನ್ ನೋಂದಾಯಿತ ಕಾರು ರಸ್ತೆ ಬದಿ ನಿಂತಿತ್ತು. ಕಾರ್ ಡೋರ್ ನಿಂದ ಟವೆಲ್ ಹೊರಗೆ ನೇತಾಡುವುದನ್ನು ಗಮನಿಸಿದ ವ್ಯಕ್ತಿ ಹತ್ತಿ ಹೋಗಿ ನೋಡಿದಾಗ ಕಾರಿನಲ್ಲಿದ್ದವರಲ್ಲಿ ಆರು ಜನ ವಾಂತಿ ಮಾಡಿಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಒಬ್ಬರ ಮೇಲೊಬ್ಬರು ಮಲಗಿದ್ದರೂ. ಓರ್ವ ವ್ಯಕ್ತಿ ಉಸಿರಾಡಲು ಕಷ್ಟಪಡುತ್ತಿದ್ದನು. ಅವರನ್ನು ಪ್ರವೀಣ್ ಮಿತ್ತಲ್ ಎನ್ನಲಾಗಿದೆ. ತನ್ನ ಕುಟುಂಬ ದೊಡ್ಡ ಸಾಲದಲ್ಲಿ ಮುಳುಗಿದೆ. ನಾನು ಸಾಯುತ್ತೇನೆ ಎಂದು ಆತ ಹೇಳುತ್ತಿದ್ದನು. ಈ ದೃಶ್ಯವನ್ನು ಕಂಡ ಸ್ಥಳೀಯ ವ್ಯಕ್ತಿ ಕೂಡಲೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದನು. ನಂತರ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದಾಗ್ಯೂ, ಯಾರನ್ನೂ ಬದುಕಿಸಲಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸ್ಥಳದಲ್ಲಿ ಡೆತ್ ನೋಟ್...
ಇನ್ನೂ ಘಟನಾ ಸ್ಥಳದಲ್ಲಿ ಎರಡು ಪುಟಗಳ ಡೆತ್ ನೋಟ್ ಒಂದು ಪತ್ತೆಯಾಗಿದೆ. ಇದರಲ್ಲಿ, ಡೆಹ್ರಾಡೂನ್ನಲ್ಲಿ ತಾವು ನಡೆಸುತ್ತಿದ್ದ ಟೂರ್ಸ್ ಅಂಡ್ ಟ್ರಾವೆಲ್ಸ್ ಬ್ಯುಸಿನೆಸ್ ನಲ್ಲಿ ಭಾರೀ ನಷ್ಟ ಅನುಭವಿಸಿದ್ದು, ಕುಟುಂಬವು ಸಾಲಬಾಧೆಯಿಂದ ಬಳಲುತ್ತಿತ್ತು. ದೈನಂದಿನ ಖರ್ಚುಗಳನ್ನು ಪೂರೈಸುವುದು ಕೂಡ ಕಷ್ಟಕರವಾಗಿದೆ. ಹಾಗಾಗಿ, ಆರ್ಥಿಕ ಸಂಕಷ್ಟ ತಾಳಲಾರದೇ ಈ ದುರಂತ ನಿರ್ಧಾರ ಕೈಗೊಂಡಿರುವುದಾಗಿ ಅದರಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.