ಚಾಮರಾಜನಗರ: ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ವ್ಯಕ್ತಿ ಸೇರಿದಂತೆ 7 ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು.


ಇದನ್ನೂ ಓದಿ- ಆಂಟಿ ಪ್ರೀತ್ಸೆ ಅಂತ ಹಿಂದೆ ಬಿದ್ದ ಪಾಗಲ್ ಪ್ರೇಮಿ! ಒಪ್ಪದ ಮಹಿಳೆಯ ಕೊಲ್ಲಲು ಮಿಕ್ಸಿಲ್ಲಿಟ್ಟ ಬಾಂಬ್?


ಪ್ರಕರಣಕ್ಕೆ ಸಂಬಂಧಿಸಿದಂತೆ  ಮೀನಜ್ ಖಾನ್ ಹಾಗೂ ಈತನಿಗೆ ಸಹಕರಿಸಿದ ಈತನ ಅಣ್ಣ ಸೇರಿ ಇತರೆ ಅಪರಾಧಿಗಳ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಚಾಮರಾಜನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ  ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಏಳು ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. 


ಇದನ್ನೂ ಓದಿ- Crime News: ರೈಲಿಗೆ ತಲೆ ಕೊಟ್ಟು ಪ್ರೇಮಿಗಳಿಬ್ಬರು ಸೂಸೈಡ್!


ಜೊತೆಗೆ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾದಿಕಾರವು 2 ಲಕ್ಷ ಪರಿಹಾರ ಕೊಡುವಂತೆ ಸೂಚಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.