ಕಾನೂನಿಗೆ ಗೌರವ ಕೊಡುತ್ತೇವೆ, ಪಲಾಯನ ವಾದವಿಲ್ಲ : ಮುರುಘಾಶ್ರೀ

Shivamurthy Murugha Swamiji : ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಇರುತ್ತೇವೆ. ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ. ನಾವುಗಳು ಈ ನೆಲದ ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾನೂನಿಗೆ ನಾವು ಯಾವತ್ತೂ ಗೌರವ ಕೊಡುತ್ತೇವೆ. ಇದರಲ್ಲಿ ಯಾವುದೇ ಪಲಾಯನ ವಾದ ಇಲ್ಲ ಎಂದು ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿಗಳು ಹೇಳಿದ್ದಾರೆ.

Written by - Chetana Devarmani | Last Updated : Aug 29, 2022, 01:33 PM IST
  • ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಇರುತ್ತೇವೆ
  • ಕಾನೂನಿಗೆ ಗೌರವ ಕೊಡುತ್ತೇವೆ, ಪಲಾಯನ ವಾದವಿಲ್ಲ
  • ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿ ಹೇಳಿಕೆ
ಕಾನೂನಿಗೆ ಗೌರವ ಕೊಡುತ್ತೇವೆ, ಪಲಾಯನ ವಾದವಿಲ್ಲ : ಮುರುಘಾಶ್ರೀ  title=
ಡಾ.ಶಿವಮೂರ್ತಿ ಸ್ವಾಮೀಜಿ

ಚಿತ್ರದುರ್ಗ : ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಇರುತ್ತೇವೆ. ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ. ನಾವುಗಳು ಈ ನೆಲದ ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾನೂನಿಗೆ ನಾವು ಯಾವತ್ತೂ ಗೌರವ ಕೊಡುತ್ತೇವೆ. ಇದರಲ್ಲಿ ಯಾವುದೇ ಪಲಾಯನ ವಾದ ಇಲ್ಲ ಎಂದು ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿಗಳು ಹೇಳಿದ್ದಾರೆ. ಯಾವುದೇ ಊಹಾಪೋಹಗಳಿಗೆ ಅವಕಾಶ ಇಲ್ಲ. ಈ ಮುಖಾಂತರ ಶ್ರೀ ಮಠದ ಭಕ್ತರು ಗಾಳಿ ಸುದ್ದಿಗಳಿಗೆ ಕಿವಿ ಕೊಡಬಾರದು ಎಂದು ಮುರುಘಾ ಶ್ರೀಗಳು ಭಕ್ತರಲ್ಲಿ ಮನವಿ ಮಾಡಿದ್ದಾರೆ. 

ಇದನ್ನೂ ಓದಿ: Murugha Mutt : ಮುರುಘಾ ಶರಣರ ಆಡಿಯೋ ವೈರಲ್ : ಅದ್ರಲ್ಲಿ ಏನಿದೆ ಗೊತ್ತಾ?

ಎಲ್ಲ ರೀತಿಯ ಸಹಕಾರವನ್ನು ಕೊಡುತ್ತೇವೆ. ಮುರುಘಾಮಠ ಒಂದು ಕಾಲದಲ್ಲಿ ಚಲಿಸುವ ನ್ಯಾಯಾಲಯವಾಗಿತ್ತು. ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗಡೆ ನಡೆಯುತ್ತಿದೆ. ಎದುರಾಗಿರುವ ಸಮಸ್ಯೆಯನ್ನು ಶಾಂತವಾಗಿ ಪರಿಹರಿಸೋಣ. ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಎಲ್ಲಾ ಆರೋಪಗಳಿಂದ ಮುಕ್ತನಾಗಿ ನಾನು ಹೊರಬರುತ್ತೇನೆ.  ಒಗ್ಗಟ್ಟಾಗಿ ಹೋರಾಡೋಣ ಎಂದು ಮುರುಘಾಶ್ರೀಗಳು ಹೇಳಿದ್ದಾರೆ. 

ಚಿತ್ರದುರ್ಗದ ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೂರು ದಾಖಲಾಗಿದ್ದು, ಈ ಬಗ್ಗೆ ಈಗಾಗಲೇ ಪೋಕ್ಸೋ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿದೆ. ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಮೈಸೂರಿನಿಂದ ಚಿತ್ರದುರ್ಗದ ಬಾಲಮಂದಿರಕ್ಕೆ ಸಂತ್ರಸ್ತ ವಿದ್ಯಾರ್ಥಿನಿಯರನ್ನು ಶಿಫ್ಟ್ ಮಾಡಲಾಗಿದೆ. ಭಾನುವಾರ(ಆ.28) ಬೆಳಗಿನ ಜಾವ 3.30ಕ್ಕೆ ಪೊಲೀಸ್  ಬಿಗಿ ಭದ್ರತೆಯಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಕಚೇರಿ ಬಳಿಯ ಬಾಲಮಂದಿರಕ್ಕೆ ವಿದ್ಯಾರ್ಥಿನಿಯರು ಆಗಮಿಸಿದ್ದಾರೆ.  

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಇಂದು ಮುರುಘಾ ಶ್ರೀಗಳಿಗೆ ಮೆಡಿಕಲ್ ಟೆಸ್ಟ್ ಸಾಧ್ಯತೆ!

ಸಿಡಬ್ಲುಸಿ ಮುಂದೆ ಈ ವಿದ್ಯಾರ್ಥಿನಿಯರು ಹಾಜಾರಾಗಿದ್ದು, ಅವರಿಗೆ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ. ಅಲ್ಲದೇ, ಮಕ್ಕಳ ಹೇಳಿಕೆ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಮೈಸೂರಿನಲ್ಲಿ ಹಾಗೂ ಚಿತ್ರದುರ್ಗದಲ್ಲಿನ ಹೇಳಿಕೆ ಒಂದೇ ಆದಲ್ಲಿ ಶ್ರೀಗಳನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ. ಇದರ ನಂತರ ಮುರುಘಾ ಶ್ರೀಗಳನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News