)
ಚಾಮರಾಜನಗರ: ಮಣ್ಣಿನಲ್ಲಿ ಹುದುಗಿಸಿದ್ದ ಅರ್ಧ ಹುಲಿ ಕಳೇಬರ ಪತ್ತೆಯಾದ ಕಳವಳಕಾರಿ ಘಟನೆ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ.
ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯದ ಹನೂರು ಗಸ್ತಿನಲ್ಲಿರುವ ಪಚೆದೊಡ್ಡಿ ಗ್ರಾಮದ ಸಮೀಪ ಗುರುವಾರ ಗಸ್ತು ತಿರುಗುವಾಗ ಹುಲಿಯ ಕಳೇಬರ ಮಣ್ಣಿನಲ್ಲಿ ಹುದಗಿಸಿರುವುದು ಪತ್ತೆಯಾಗಿದೆ.
ಹುಲಿಯ ತಲೆ, ಭುಜ, ಮುಂಗಾಲುಗಳು ಪತ್ತೆಯಾಗಿದ್ದು ಉಳಿದ ಭಾಗಗಳು ಸಿಕ್ಕಿಲ್ಲ. ಅರಣ್ಯ ಇಲಾಖೆಗೆ ಸಿಕ್ಕಿರುವ ಕಳೇಬರದಲ್ಲಿ ಉಗುರುಗಳು ಮತ್ತು ಹಲ್ಲುಗಳು ಇದ್ದು ಇನ್ನುಳಿದ ಭಾಗವನ್ನು ಹುಡುಕಲು ಕ್ರಮ ವಹಿಸಿದ್ದಾರೆ.
ಕಳ್ಳ ಬೇಟೆಯ ಪ್ರಕರಣವೆಂದು ಪರಿಗಣಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.